ಅಭಿಮಾನಿಗಳೊಂದಿಗೆ ಸಭೆ- ಸ್ವತಂತ್ರ ಅಭ್ಯರ್ಥಿಯಾಗಿ ರಘುಪತಿ ಭಟ್ ಸ್ಪರ್ಧೆ.?

ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ವೇಳೆ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆಗೊಳಿಸಿದ್ದು, ಈ ಪಟ್ಟಿಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ. ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ ಉಡುಪಿ ಮತ್ತು ಇತರ ಕ್ಷೇತ್ರಗಳ ಅಭ್ಯರ್ಥಿ ಘೋಷಣೆಯ ಬೆನ್ನಲ್ಲೇ ನಡೆದ ತ್ವರಿತ ಬೆಳವಣಿಗೆಯೊಂದಿಗೆ, ಉಡುಪಿ ಹಾಲಿ ಶಾಸಕ ರಘುಪತಿ ಭಟ್ ಅವರು ಇಂದು ತಮ್ಮ ನಿವಾಸದಲ್ಲಿ ಅಭಿಮಾನಿಗಳ ಸಭೆ ಕರೆದಿದ್ದು, ಮುಂದಿನ ರಾಜಕೀಯ ನಿಲುವಿನ ಬಗ್ಗೆ ಭಟ್ ನಿರ್ಧರಿಸಲಿದ್ದಾರೆ ಎಂದು […]