ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಶ್ರೀ ಯಶ್ ಪಾಲ್ ಸುವರ್ಣ ಆಗಮನ
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಶ್ರೀ ಯಶ್ ಪಾಲ್ ಸುವರ್ಣ ರವರು ಆಗಮಿಸಿದ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುರೇಶ್ ನಾಯಕ್ ಕುಯಿಲಾಡಿ ಹಾಗೂ ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ ಶ್ರೀ ಪ್ರಸಾದ್ ಕುಮಾರ್ ಸ್ವಾಗತಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪಕ್ಷದ ನಾಯಕರು, ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.