ಸೆಪ್ಟಂಬರ್ 11 ರಂದು ಅರಣ್ಯ ಹುತಾತ್ಮರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ
ಉಡುಪಿ: ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ, ಅರಣ್ಯ ರಕ್ಷಕರ ಮತ್ತು ವೀಕ್ಷಕರ ಸಂಘ ಹಾಗೂ ರಕ್ತನಿಧಿ ಕೇಂದ್ರ ಜಿಲ್ಲಾ ಸರಕಾರಿ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಅರಣ್ಯ ಹುತಾತ್ಮರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರವು ಸೆಪ್ಟಂಬರ್ 11 ರಂದು ಬೆಳಗ್ಗೆ 10 ಗಂಟೆಗೆ ನಗರದ ಬ್ರಹ್ಮಗಿರಿಯ ಐ.ಎಮ್.ಎ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಉಪವಲಯ ಅರಣ್ಯ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ನಾಗೇಶ್ ಬಿಲ್ಲವ ಅಧ್ಯಕ್ಷತೆ ವಹಿಸಲಿದ್ದಾರೆ. […]
ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜನೆ
ಉಡುಪಿ: ಶ್ರೇಷ್ಠವಾದ ರಕ್ತದಾನದಿಂದ ಆಪತ್ತಿನಲ್ಲಿರುವವರ ಜೀವ ರಕ್ಷಣೆ ಮಾಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ. ಹೆಚ್ ಹೇಳಿದರು. ಅವರು ಇಂದು ಚಿಟ್ಪಾಡಿಯ ಸೈಂಟ್ ಮೇರಿಸ್ ಖಾಸಗಿ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ(ರಿ.), ಅಪ್ಪು ಅಭಿಮಾನಿಗಳ ಬಳಗ, ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಲಯನ್ಸ್ […]
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ ಆಯೋಜನೆ
ನಿಟ್ಟೆ: ಇಂದು ನಾವು ತಂತ್ರಜ್ಞಾನದ ವಿಚಾರವಾಗಿ ಎಷ್ಟೇ ಮುಂದುವರಿದಿದ್ದರೂ ಪ್ರತಿಯೋರ್ವ ಜೀವಿಗೆ ಅಗತ್ಯವಿರುವ ರಕ್ತದಂತಹ ವಸ್ತುವನ್ನು ಕೃತಕವಾಗಿ ಉತ್ಪಾದಿಸಲು ಆಗುವುದಿಲ್ಲ. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ರಕ್ತದ ಮಹತ್ವ ಹಾಗೂ ಜೀವ ಉಳಿಸುವ ನಿಟ್ಟಿನಲ್ಲಿ ರಕ್ತದಾನದ ಅಗತ್ಯತೆಯನ್ನು ತಿಳಿದುಕೊಳ್ಳಬೇಕು ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕಾರ್ಕಳ ಘಟಕದ ಅಧ್ಯಕ್ಷ ಡಾ. ಕೆ.ಆರ್ ಜೋಷಿ ಹೇಳಿದರು. ಅವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್), ರೆಡ್‌ಕ್ರಾಸ್ ಸೊಸೈಟಿ, 6 (ಕೆ.ಎ.ಆರ್) ನೇವಿ ಎನ್.ಸಿ.ಸಿ ಸಬ್‌ಯುನಿಟ್ ನಿಟ್ಟೆ, ಮೆಕ್ಯಾನಿಕಲ್ […]
ಮೇ 29 ರಂದು ಬೈಲೂರಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಕಾರ್ಕಳ: ಹಿಂದೂ ಜಾಗರಣ ವೇದಿಕೆ ಬೈಲೂರು ವಲಯ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್(ರಿ.), ಉಡುಪಿ, ರಕ್ತನಿಧಿ, ಕೆ.ಎಂ.ಸಿ ಆಸ್ಪತ್ರೆ ಮಣಿಪಾಲ ಇವರ ಸಹಯೋಗದೊಂದಿಗೆ, ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಮೇ 29 ರವಿವಾರದಂದು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ರವರೆಗೆ ಬೈಲೂರಿನ ಸರಕಾರಿ ಕಾಲೇಜಿನಲ್ಲಿ ಆಯೋಜಿಸಲಾಗಿದೆ. ದಾನಿಗಳು ಸ್ವಯಂ ಪ್ರೇರಣೆಯಿಂದ ರಕ್ತ ದಾನ ಮಾಡಿ ಜೀವ ಉಳಿಸಬೇಕಾಗಿ ಕೇಳಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸುರೇಶ್ ಸಾಲ್ಯಾನ್-9449281268, ದೀಪಕ್-7022918175, ರಕ್ತದ ಆಪತ್ಭಾಂಧವ ಸತೀಶ್ ಸಾಲ್ಯಾನ್-9986668476 ಮಾಣಿಪಾಲ್ ಇವರನ್ನು ಸಂಪರ್ಕಿಸಲು ಕೋರಲಾಗಿದೆ.