ಒಂದೇ ದಿನದಲ್ಲಿ ಗರಿಷ್ಠ ಸಂಖ್ಯೆಯ ರಕ್ತದಾನ: ಹೊಸ ವಿಶ್ವ ದಾಖಲೆ ಸೃಷ್ಟಿಸಿದ ಭಾರತ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ 72 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ‘ರಕ್ತದಾನ ಅಮೃತ ಮಹೋತ್ಸವ’ ಕಾರ್ಯಕ್ರಮದ ಅಡಿಯಲ್ಲಿ ಭಾರತವು ನಿನ್ನೆ ಒಂದೇ ದಿನದಲ್ಲಿ ಗರಿಷ್ಠ ಸಂಖ್ಯೆಯ ರಕ್ತದಾನಗಳ ಹೊಸ ವಿಶ್ವ ದಾಖಲೆಯನ್ನು ಬರೆದಿದೆ. ಇದು ದೇಶದಾದ್ಯಂತ ನಡೆದ ಅತಿ ದೊಡ್ಡ ರಕ್ತದಾನ ಅಭಿಯಾನವಾಗಿತ್ತು. ಶನಿವಾರದಂದು 6112 ಕ್ಕೂ ಹೆಚ್ಚು ಅನುಮೋದಿತ ಶಿಬಿರಗಳಲ್ಲಿ 1 ಲಕ್ಷಕ್ಕೂ ಹೆಚ್ಚು ದಾನಿಗಳು ರಕ್ತದಾನ ಮಾಡಿದ್ದು, ಈ ಸಂಖ್ಯೆ ಇನ್ನೂ ಹೆಚ್ಚುತ್ತಲಿದೆ. ಈ ಅಭಿಯಾನವು ನಿಯಮಿತ ಸಂಭಾವನೆ ಪಡೆಯದ ಸ್ವಯಂಪ್ರೇರಿತ ರಕ್ತದಾನಗಳ ಬಗ್ಗೆ […]

ತ್ರಿಶಾ ವಿದ್ಯಾ ಕಾಲೇಜಿನ ವತಿಯಿಂದ ರಕ್ತದಾನ ಶಿಬಿರ

ಉಡುಪಿ: ತ್ರಿಶಾ ವಿದ್ಯಾ ಕಾಲೇಜಿನ ಯೂತ್ ರೆಡ್ ಕ್ರಾಸ್ ಘಟಕ ಮತ್ತು ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಕುಂದಾಪುರ ಇದರ ಸಹಯೋಗದಲ್ಲಿ ರಕ್ತದಾನ ಶಿಬಿರವು ಕಾಲೇಜಿನ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತ್ರಿಶಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಸಿಎ ಗೋಪಾಲಕೃಷ್ಣ ಭಟ್ ರಕ್ತದಾನ ಎನ್ನುವುದು ಜೀವ ಉಳಿಸುವ ಪ್ರಕ್ರಿಯೆಯಾಗಿದ್ದು, ಇಂತಹ ಶಿಬಿರಗಳು ಜನರಲ್ಲಿ ಮಾನವೀಯತೆಯನ್ನು ವೃದ್ಧಿಗೊಳಿಸುತ್ತವೆ ಎಂದರು. ಕಾರ್ಯಕ್ರಮದ ಅತಿಥಿಗಳಾಗಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಚೇರ್ಮನ್ ಎಸ್.ಜಯಕರ […]

ಜ್ಞಾನಸುಧಾ ಸಂಸ್ಥಾಪಕರ ದಿನಾಚರಣೆ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮ

ಕಾರ್ಕಳ: ಜ್ಞಾನಸುಧಾ ಸಂಸ್ಥೆಗಳ ಸಂಸ್ಥಾಪಕ ದಿ.ಗೋಪ ಶೆಟ್ಟಿಯವರ 101ನೇ ಜನ್ಮದಿನಾಚರಣೆಯ ಪ್ರಯುಕ್ತ ಅಜೆಕಾರ್‌ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌, ಜ್ಞಾನಸುಧಾ ಶಿಕ್ಷಣ ಸಂಸ್ಥೆ ಗಣಿತ ನಗರ ಹಾಗೂ ನಾಗಬನ ಕ್ಯಾಂಪಸ್‌ ಉಡುಪಿ, ಜ್ಞಾನಸುಧಾ ಎನ್‌.ಎಸ್‌.ಎಸ್‌ ಹಾಗೂ ಎನ್‌.ಸಿ.ಸಿ ಘಟಕ, ಜ್ಞಾನಸುಧಾ ಹಳೆ ವಿದ್ಯಾರ್ಥಿ ಸಂಘ ಮತ್ತು ಇಂಡಿಯನ್‌ ರೆಡ್‌ಕ್ರಾಸ್‌ ಸೊಸೈಟಿ ಕಾರ್ಕಳ – ಕುಂದಾಪುರ ಇವರ ಸಹಯೋಗದೊಂದಿಗೆ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜರುಗಿದ ರಕ್ತದಾನ ಶಿಬಿರವನ್ನು ರೆಡ್‌ಕ್ರಾಸ್‌ ಸೊಸೈಟಿ ಕಾರ್ಕಳ ಇದರ ಅಧ್ಯಕ್ಷ ಖ್ಯಾತ ವೈದ್ಯ […]

ರಕ್ತದಾನದ ಬಗ್ಗೆ ಯುವಕರಲ್ಲಿ ಅರಿವು ಮೂಡಿಸುವ ಕೆಲಸವಾಗಲಿ: ಯಶ್ ಪಾಲ್ ಸುವರ್ಣ

ರಕ್ತದಾನ ಮಾಡುವುದರಿಂದ ನಾವು ಆರೋಗ್ಯವಂತರಾಗಿರಬಹುದು. ಉಡುಪಿ ಜಿಲ್ಲೆಯಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಸಂಘ-ಸಂಸ್ಥೆಗಳು ರಕ್ತದಾನ ಶಿಬಿರವನ್ನು ಆಯೋಜಿಸಿ ರಕ್ತದಾನ ಮಾಡುವ ಬಗ್ಗೆ ಯುವ ಸಮುದಾಯಕ್ಕೆ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ ಎಂದು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ನ ಗೌರವಾಧ್ಯಕ್ಷ ಯಶ್ ಪಾಲ್ ಸುವರ್ಣ ಹೇಳಿದರು. ಅವರು ಎಳ್ಳಾರೆ ಶ್ರೀ ಜನಾರ್ದನ ಶಾಲೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಡ್ತಲ ಗ್ರಾ.ಪಂ […]

5 ಕೋಟಿ ಯೂನಿಟ್‌ಗಳಷ್ಟು ರಕ್ತದ ಅವಶ್ಯಕತೆ ಇರುವ ಭಾರತದಲ್ಲಿ ಪೂರೈಕೆಯಾಗುವುದು 50% ಮಾತ್ರ

ಆರೋಗ್ಯ ಸೇವೆಯಲ್ಲಿ ರಕ್ತ ವರ್ಗಾವಣೆಗಳು ಪ್ರಮುಖ ಪಾತ್ರ ವಹಿಸುತ್ತವೆ. ನಿರ್ದಿಷ್ಟವಾಗಿ ಮಹಿಳೆಯರು ಮತ್ತು ಮಕ್ಕಳನ್ನು ರಕ್ತದ ಕೊರತೆ ಕಾಡುತ್ತದೆ. ಭಾರತಕ್ಕೆ ಹಲವಾರು ವೈದ್ಯಕೀಯ ಅಸ್ವಸ್ಥತೆಗಳ ಚಿಕಿತ್ಸೆಗಾಗಿ ಸುಮಾರು 5 ಕೋಟಿ ಯೂನಿಟ್‌ಗಳಷ್ಟು ರಕ್ತದ ಬೃಹತ್ ಅವಶ್ಯಕತೆ ಇರುತ್ತದೆ. ಪೂರೈಕೆ ಮತ್ತು ಬೇಡಿಕೆಗಳ ನಡುವಿನ ಅಂತರ ಬಹುತೇಕ ಅರ್ಧದಷ್ಟು ಇದೆ. ವಾಸ್ತವವಾಗಿ ಪ್ರತಿ ಎರಡು ಸೆಕೆಂಡುಗಳಿಗೊಮ್ಮೆ ದೇಶದ ಯಾವುದೋ ಒಂದು ಸ್ಥಳದಲ್ಲಿ ರಕ್ತ ವರ್ಗಾವಣೆಯ ಅವಶ್ಯಕತೆ ಇರುತ್ತದೆ. ಅಂದರೆ ಪ್ರತಿ ದಿನ 35,000ಕ್ಕೂ ಹೆಚ್ಚಿನ ರಕ್ತದಾನಗಳ ಅಗತ್ಯವಿರುತ್ತದೆ ಎಂದು […]