ಕರಾವಳಿಯ ಸಮುದ್ರ ತಟದ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣಕ್ಕೆ 840 ಕೋಟಿ ರೂಗಳ ಬ್ಲೂ ಪ್ಯಾಕ್ ಯೋಜನೆ: ಈಶ್ವರ ಖಂಡ್ರೆ
ಉಡುಪಿ: ಕಡಲ ಒಡಲನ್ನು ಮತ್ತು ತೀರವನ್ನು ಆವರಿಸಿರುವ ಮಾರಕ ಪ್ಲಾಸ್ಟಿಕ್ ತ್ಯಾಜ್ಯ ಹಲವು ಜಲಚರಗಳ ಸಾವಿಗೆ ಕಾರಣವಾಗುತ್ತಿದ್ದು, ಇಂತಹ ಪ್ಲಾಸ್ಟಿಕ್ ಸಮುದ್ರ ಸೇರದಂತೆ ನಿಗ್ರಹಿಸುವ ಮತ್ತು ಪಶ್ಚಿಮ ಘಟ್ಟದ ಜೀವವೈವಿಧ್ಯತೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ಪ್ರಸ್ತಾಪಿತ ಕೆ.ಶೂರು – ಬ್ಲೂ ಪ್ಯಾಕ್ ಯೋಜನೆಗೆ ಸಮರ್ಪಕವಾದ ವಿಸ್ತೃತ ಯೋಜನಾ ವರದಿ (ಡಿ.ಪಿ.ಆರ್) ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪರಿಸರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಂಗಳವಾರ ತಮ್ಮ ಕಾರ್ಯಾಲಯದಲ್ಲಿ ಹಿರಿಯ ಪರಿಸರ ಅರ್ಥಶಾಸ್ತ್ರಜ್ಞ […]