ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಉತ್ತಮ ಜನಸ್ಪಂದನೆ

ಕುಂದಾಪುರ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಅವರ ಗ್ರಾಮಗಳಿಗೆ ತೆರಳಿ, ಅರಿತು ಅವುಗಳಿಗೆ ಸೂಕ್ತ ಪರಿಹಾರ ಒದಗಿಸುವ ಮತ್ತು ಸರಕಾರದ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಜ.21 ರಂದು ನಾಗೂರಿನಶ್ರೀ ಲಲಿತ ಕೃಷ್ಣ ಕಲಾಮಂದಿರದಲ್ಲಿ ನಡೆದ ಕಿರಿಮಂಜೇಶ್ವರ ಗ್ರಾಮ ವ್ಯಾಪ್ತಿಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾಧಿಕಾರಿಗಳ […]

ಹಕ್ಕಿ ಹಬ್ಬದ ಮೂಲಕ ಸ್ಥಳೀಯ ಪಕ್ಷಿಗಳ ಪರಿಚಯ: ಬಿ.ಎಂ ಸುಕುಮಾರ ಶೆಟ್ಟಿ

ಉಡುಪಿ: ಕೊಲ್ಲೂರು ಅಭಯಾರಣ್ಯ ಸೇರಿದಂತೆ ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿರುವ ಹಲವು ಬಗೆಯ ಅಪರೂಪದ ಹಕ್ಕಿಗಳ ಬಗ್ಗೆ ಹಕ್ಕಿ ಹಬ್ಬದ ಮೂಲಕ ನಾಡಿಗೆ ಪರಿಚಯಿಸುವ ಕಾರ್ಯ ಉತ್ತಮವಾದುದು ಎಂದು ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಕೊಲ್ಲೂರಿನ ಹಲ್ಕಲ್‌ನಲ್ಲಿ ಕರ್ನಾಟಕ ಅರಣ್ಯ ಇಲಾಖೆ ಹಾಗೂ ರಾಜ್ಯ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ನಡೆದ ಕರ್ನಾಟಕ ಹಕ್ಕಿ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅರಣ್ಯ ಇಲಾಖೆಯ ಮೂಲಕ ಅರಣ್ಯದ ರಕ್ಷಣೆ ಉತ್ತಮ ರೀತಿಯಲ್ಲಿ ನಡೆಯುತ್ತಿದ್ದು, […]

ಮರವಂತೆ ಮೀನುಗಾರರ ಸಹಕಾರ ಸಂಘ ನೂತನ ಕಟ್ಟಡ ಉದ್ಘಾಟನೆ

ಬೈಂದೂರು: ಮರವಂತೆ ಮೀನುಗಾರರ ಸಹಕಾರ ಸಂಘ ನಿ., ಮರವಂತೆ ಬೈಂದೂರು, ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ದಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಭಾಗವಹಿಸಿ ಶುಭ ಹಾರೈಸಿದರು. ಸಮಾರಂಭವನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ ಎಂ ಸುಕುಮಾರ ಶೆಟ್ಟಿ ಉದ್ಘಾಟಿಸಿದರು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಂಸ್ಥೆಯ ಅಧ್ಯಕ್ಷ ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.