ಗ್ರೀಸ್‌ ದೋಣಿ ದುರಂತದಲ್ಲಿ 500 ಕ್ಕೂ ಅಧಿಕ ಮಂದಿ ನಾಪತ್ತೆ 78 ಜನರ ಸಾವು

ಅಥೆನ್ಸ್: ಜೂನ್ 14 ರಂದು ನೂರಾರು ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಮೀನುಗಾರಿಕಾ ದೋಣಿಯೊಂದು ಗ್ರೀಸ್ ಕರಾವಳಿಯಲ್ಲಿ ಮುಳುಗಿದ ಬಳಿಕ ಸುಮಾರು 500 ಜನರು ನಾಪತ್ತೆಯಾಗಿದ್ದಾರೆ ಎಂದು ಅಮೆರಿಕ ಏಜೆನ್ಸಿಗಳು ತಿಳಿಸಿವೆ. ಅಂತಾರಾಷ್ಟ್ರೀಯ ವಲಸೆ ಸಂಸ್ಥೆ (ಐಒಎಂ) ಮತ್ತು ಯುಎನ್ ನಿರಾಶ್ರಿತರ ಸಂಸ್ಥೆ (ಯುಎನ್‌ಎಚ್‌ಸಿಆರ್) ಶುಕ್ರವಾರ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ದೋಣಿಯಲ್ಲಿದ್ದ ಜನರ ಸಂಖ್ಯೆ ಸ್ಪಷ್ಟವಾಗಿ ತಿಳಿದುಬಂದಿಲ್ಲವಾದರೂ 400 ರಿಂದ 750 ಮಂದಿ ಪ್ರಯಾಣಿಸುತ್ತಿದ್ದರು ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದೆ. ಜೂನ್ 14 ರಂದು ಗ್ರೀಸ್ ಕರಾವಳಿಯಲ್ಲಿ ನಡೆದ ದೋಣಿ […]