ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ ಬೋಟ್ ಮುಳುಗಡೆ: ಆರು ಜನರ ರಕ್ಷಣೆ

ಮಲ್ಪೆ: ಮೀನುಗಾರಿಕೆಗೆ ತೆರಳಿದ ಬೋಟ್ ವೊಂದು ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಸಮುದ್ರ ಮಧ್ಯೆ ಮುಳುಗಡೆಯಾದ ಘಟನೆ ಮಲ್ಪೆಯಲ್ಲಿ ಸಂಭವಿಸಿದೆ. ಮೀನುಗಾರಿಕೆ ಮುಗಿಸಿಕೊಂಡು ವಾಪಸ್ ಬರುವ ವೇಳೆ ದುರ್ಘಟನೆ ನಡೆದಿದೆ. ಬೋಟ್ ನಲ್ಲಿದ್ದ ಆರು ಮಂದಿಯನ್ನು ಪಕ್ಕದ ಬೋಟ್ ನವರು ರಕ್ಷಣೆ ಮಾಡಿದ್ದಾರೆ. ಘಟನೆಯಿಂದ ಬೋಟ್ ನಲ್ಲಿದ್ದ 5 ಲಕ್ಷ ಮೌಲ್ಯದ ಮೀನು ಹಾಗೂ ಬಲೆ ಸಮುದ್ರ ಪಾಲಾಗಿದೆ. ಕರಾವಳಿ ಕಾವಲು ಪಡೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ