ಸೈಂಟ್ ಮೇರೀಸ್ ದ್ವೀಪದಲ್ಲೇ ರಾತ್ರಿ ಕಳೆದ ಪ್ರವಾಸಿಗರು; ಬೋಟ್ ತಪ್ಪಿದ ಪರಿಣಾಮ ಘಟನೆ

ಉಡುಪಿ: ಪ್ರವಾಸಿಗರನ್ನು ಕರೆದೊಯ್ಯುವ ಕೊನೆಯ ಬೋಟು ತಪ್ಪಿದ ಪರಿಣಾಮ  ನಾಲ್ವರು ಪ್ರವಾಸಿಗರು ಮಲ್ಪೆ ಸಮುದ್ರ ಮಧ್ಯೆ ಇರುವ ಸೈಂಟ್ ಮೇರಿಸ್ ದ್ವೀಪದಲ್ಲಿ ಇಡೀ ರಾತ್ರಿ ಕಳೆದ ಆತಂಕಕಾರಿ ಘಟನೆ ನ.23ರಂದು ನಡೆದಿದೆ. ಕೇರಳದ ಕೊಚ್ಚಿನ್ ನಿವಾಸಿಗಳಾದ ಜಸ್ಟಿನ್(34), ಶೀಜಾ(33), ಜೋಶ್(28) ಹಾಗೂ ಹರೀಶ್(17) ಅವರು ದ್ವೀಪಕ್ಕೆ ತೆರಳಿ ಅಲ್ಲೇ ಉಳಿದವರು. ನ.24ರಂದು ಬೆಳಗ್ಗೆ 7:30ರ ಸುಮಾರಿಗೆ ಸೈಂಟ್ ಮೇರಿಸ್ ದ್ವೀಪದಿಂದ ರಕ್ಷಿಸಿ ತೀರಕ್ಕೆ ಕರೆತರಲಾಗಿದೆ. ಇವರನ್ನು ವಿಚಾರಣೆ ನಡೆಸಿದ ಮಲ್ಪೆ ಪೊಲೀಸರು ಇವರನ್ನು ಸುರಕ್ಷಿತವಾಗಿ ಕೇರಳ ರಾಜ್ಯಕ್ಕೆ […]