ಕರಾವಳಿಗರಿಗೆ ಕುಚ್ಚಲಕ್ಕಿ ಭಾಗ್ಯ: ಪಡಿತರ ವಿತರಣೆಗೆ ಕೇಂದ್ರ ಅಸ್ತು

ಮಂಗಳೂರು/ ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳೆಯುವ ಮತ್ತು ಇಲ್ಲಿನ ಜನತೆ ಬಹುವಾಗಿ ಇಷ್ಟಪಟ್ಟು ಸೇವಿಸುವ ಕುಚ್ಚಲಕ್ಕಿಯನ್ನು ಪಡಿತರ ವಿತರಣೆಯಲ್ಲಿ ನೀಡಬೇಕು ಎನ್ನುವ ಬಹುದಿನಗಳ ಬೇಡಿಕೆ ಕಡೆಗೂ ಈಡೇರಿದೆ. ಕರಾವಳಿಯ ಅವಳಿ ಜಿಲ್ಲೆಗಳಲ್ಲಿ ಸ್ಥಳೀಯ ಕುಚ್ಚಲಕ್ಕಿಯನ್ನು ಖರೀದಿಸಿ, ಪಡಿತರ ವ್ಯವಸ್ಥೆಯಡಿ ವಿತರಿಸಲು ಕೇಂದ್ರ ಸರಕಾರ ಅನುಮತಿ ನೀಡಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಪಡಿತರ ವ್ಯವಸ್ಥೆಯಡಿ ಕುಚ್ಚಲಕ್ಕಿ ವಿತರಿಸುವ ಸಾರ್ವಜನಿಕರ ಬೇಡಿಕೆಯ ಬಗ್ಗೆ ಕೇಂದ್ರ ಆಹಾರ ಮತ್ತು […]