ಪಾಕಿಸ್ತಾನದಲ್ಲಿ ಬಾಂಬ್‌ ಸ್ಫೋಟ: 44 ಮಂದಿ ಮೃತ್ಯು, 200ಕ್ಕೂ ಅಧಿಕ ಮಂದಿಗೆ ಗಾಯ

ಪಾಕಿಸ್ತಾನ ಅಫ್ಘಾನಿಸ್ತಾನ ಗಡಿಯ ಸಮೀಪವಿರುವ ಖಾರ್ ಪಟ್ಟಣದಲ್ಲಿ ರಾಜಕೀಯ ಕಾರ್ಯಕ್ರಮದಲ್ಲಿ ಬಾಂಬ್‌ ಸ್ಫೋಟಗೊಂಡ ಪರಿಣಾಮ 44 ಮಂದಿ ಸಾವನ್ನಪ್ಪಿದ್ದು, 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಜಮಿಯತ್ ಉಲೇಮಾ-ಎ-ಇಸ್ಲಾಂ-ಎಫ್ ರಾಜಕೀಯ ಪಕ್ಷದ ಕಾರ್ಯಕ್ರಮ ನಡೆಯುತ್ತಿದ್ದು, ಟೆಂಟ್‌ ಒಳಗಡೆ ನಡೆಯುತ್ತಿದ್ದ ಈ ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು. ಈ ದಾಳಿಯಲ್ಲಿ ಸ್ಥಳೀಯ ಜೆಯುಎಲ್‌-ಎಫ್‌ ನಾಯಕ ಮೃತಪಟ್ಟಿದ್ದಾರೆ.