ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಹೆಬ್ರಿಯ ವ್ಯಕ್ತಿಯ ಬಂಧನ
ಮಂಗಳೂರು: ಮಂಗಳೂರಿನ ಬಜ್ಪೆ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಬೆದರಿಕೆಯೊಡ್ಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಮಧ್ಯಾಹ್ನ ವಿಮಾನ ನಿಲ್ದಾಣದ ಹಿಂದಿನ ನಿರ್ದೇಶಕರಾಗಿದ್ದ ವಾಸುದೇವ್ ರಾವ್ ಅವರ ಮೊಬೈಲ್‌ಗೆ ವ್ಯಕ್ತಿಯೊಬ್ಬ ಕರೆ ಮಾಡಿ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಬೆದರಿಕೆ ಹಾಕಿದ್ದನು. ತಕ್ಷಣವೇ ಅವರು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇದೊಂದು ಹುಸಿ ಬಾಂಬ್ ಕರೆ ಎಂಬುದು ದೃಢಪಟ್ಟಿದೆ. ವಿಮಾನ ನಿಲ್ದಾಣಕ್ಕೆ ಯಾವುದೇ ನೇರ ಬೆದರಿಕೆ ಕರೆ ಬಂದಿಲ್ಲ.ಆದರೆ ಮಾಜಿ ನಿರ್ದೇಶಕರ […]