ಮಂಗಳೂರು ವಿಮಾನ ನಿಲ್ದಾಣ ಬಾಂಬ್ ಪ್ರಕರಣ: ಆದಿತ್ಯ ರಾವ್ ಬಂಧನ
ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಮೂಲದ ಆದಿತ್ಯ ರಾವ್ ನನ್ನು ಬುಧವಾರ ಬಂಧಿಸಲಾಗಿದೆ. ಮುಂಜಾನೆ ಆರೋಪಿ ಆದಿತ್ಯ ರಾವ್ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ತಾನೇ ಏರ್ಪೋರ್ಟ್ನಲ್ಲಿ ಬಾಂಬ್ ಇಟ್ಟಿದ್ದು ಎಂದು ಖುದ್ದು ಆದಿತ್ಯ ರಾವ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದ. ಈ ಕುರಿತು ವಿಚಾರಣೆಗಾಗಿ ಮಂಗಳೂರು ಪೊಲೀಸರು ಬೆಂಗಳೂರಿಗೆ ತೆರಳಿ ವಿಚಾರಣೆ ನಡೆಸುವುದಾಗಿ ಮಂಗಳೂರು ಪೊಲೀಸ್ ಆಯುಕ್ತ […]