ಬಿಜೆಪಿ ಆಡಳಿತಾವಧಿಯಲ್ಲಿ ಸಹಕಾರಿಸಿದ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ ಬೊಮ್ಮಾಯಿ
ಬೆಂಗಳೂರು: ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತಾವಧಿಯಲ್ಲಿ ದಿಟ್ಟ ತೀರ್ಮಾನ ಕೈಗೊಳ್ಳಲು ಸಹಕರಿಸಿದವರೆಲ್ಲರಿಗೂ ಧನ್ಯವಾದ ಹೇಳಿದರು. ಮಂಗಳವಾರ ಅವರು ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಚಹಾ ಕೂಟ ಏರ್ಪಡಿಸಿ ಮಾತುಕತೆ ನಡೆಸಿದರು. ನಾನು ಅಧಿಕಾರಕ್ಕೆ ಬಂದಾಗ ಕೋವಿಡ್, ಪ್ರವಾಹ ಸಂದರ್ಭ ಎದುರಾಗಿತ್ತು. ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸಿದೆ. ಯಾವುದೇ ಅಹಿತಕರ ಘಟನೆ ನಮ್ಮ ಆಡಳಿತ ಅವಧಿಯಲ್ಲಿ ನಡೆಯಲಿಲ್ಲ. ನಮ್ಮ ಎಲ್ಲಾ ಆಡಳಿತಾತ್ಮಕ ವ್ಯವಸ್ಥೆಗೆ ಗೃಹ ಇಲಾಖೆ ಸಹಕರಿಸಿದೆ. ಎಲ್ಲ ಯೋಜನೆಗಳ […]