ಜನರ ಕಣ್ಣಿಗೆ ಮಣ್ಣೆರಚುವ ತಂತ್ರದ ಬಜೆಟ್ ನಿಂದ ಯಾವುದೇ ಪ್ರಯೋಜನವಿಲ್ಲ: ಕೃಷ್ಣಮೂರ್ತಿ ಆಚಾರ್ಯ
ಉಡುಪಿ: ಶುಕ್ರವಾರದ ಅಧಿವೇಶನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿ ನಮ್ಮ ಕರಾವಳಿ ಜಿಲ್ಲೆಗಳನ್ನು ಮತ್ತೆ ಕಡೆಗಣಿಸಿದ್ದಾರೆ. ತುಳು ಭಾಷೆಯನ್ನು ಸರ್ಕಾರದ ಮಂತ್ರಿ ಸಭೆಯಲ್ಲಿಯೇ ಅವಮಾನ ಮಾಡಿದಾರೆ. ಅದೇ ರೀತಿ ಅನೇಕ ಸಮುದಾಯಗಳ ಬೇಡಿಕೆಗೆ ಬಜೆಟ್ ನಲ್ಲಿ ಕಿಂಚಿತ್ತೂ ಸ್ಪಂದಿಸುವ ಕೆಲಸ ಮಾಡಿಲ್ಲ. ಅನೇಕ ಸಮುದಾಯಗಳ ಅಭಿವೃದ್ಧಿ ನಿಗಮ ಮಂಡಳಿಗೆ ಅನುದಾನವೂ ಘೋಷಣೆ ಮಾಡಿಲ್ಲ. ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ ಊಟಕ್ಕೆ ಇಲ್ಲದ ಉಪ್ಪಿನಕಾಯಿಯಂತಾಗಿದೆ. ಇದರಿಂದ ಯಾರಿಗೂ ಪ್ರಯೋಜನ ಇಲ್ಲ. ಕಳೆದ ಬಾರಿ ಬಜೆಟ್ ನಲ್ಲಿ […]
ಹಾಸನ ಭೀಕರ ಅಪಘಾತದಲ್ಲಿ ಮೃತರಾದ ಕುಟುಂಬದವರಿಗೆ 2 ಲಕ್ಷ ರೂ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಬೊಮ್ಮಾಯಿ
ಹಾಸನ: ಜಿಲ್ಲೆಯ ಅರಸೀಕೆರೆ ಬಳಿ ನಿನ್ನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಒಂಬತ್ತು ಜನರ ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಕೆಆರ್‌ಪೇಟೆ ತಾಲೂಕಿನ ಅಂಬಿಗ್ರಾಮ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಶವಗಳನ್ನು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಗಳಿಗೆ ಹಸ್ತಾಂತರಿಸಲಾಗುವುದು ಎಂದಿದ್ದಾರೆ. ಬಾಣಾವರ ಪೊಲೀಸ್ ವ್ಯಾಪ್ತಿಯ ಚಲುವನಹಳ್ಳಿ ಬಳಿ ಸರ್ಕಾರಿ ಬಸ್ ಮತ್ತು ಟೆಂಪೋ ಟ್ರಾವೆಲರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಮಕ್ಕಳು ಮತ್ತು ನಾಲ್ವರು ಮಹಿಳೆಯರು ಸೇರಿದಂತೆ […]
ಪ್ರವೀಣ್ ಹತ್ಯೆ ಪ್ರಕರಣ ಎನ್.ಐ.ಎ ಗೆ ಹಸ್ತಾಂತರ: ಸಿಎಂ ಬೊಮ್ಮಾಯಿ
ಬೆಂಗಳೂರು: ಪ್ರವೀಣ್ ಹತ್ಯೆ ಪ್ರಕರಣವನ್ನ ಎನ್.ಐ.ಎಗೆ ಹಸ್ತಾಂತರ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಡಿಜಿ ಐಜಿಪಿ ಪ್ರವೀಣ್ ಸೂದ್ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಂಡಿರೋದಾಗಿ ಬೊಮ್ಮಾಯಿ ಹೇಳಿದ್ದಾರೆ. ಪ್ರವೀಣ್ ಹತ್ಯೆ ಕೇಸ್ ವ್ಯವಸ್ಥಿತ ಸಂಚು, ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇನೆ. ಪ್ರಕರಣದ ತನಿಖೆ ತ್ವರಿತಗತಿಯಲ್ಲಿ ನಡೆಯುತ್ತಿದೆ. ಪ್ರಕರಣ ಎರಡು ರಾಜ್ಯಕ್ಕೆ ಸಂಬಂಧಿಸಿದ್ದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ .ಐ.ಎ ಗೆ ಪತ್ರ ಬರೆಯಲು ಹೇಳಿದ್ದೇನೆ. ಪ್ರಕರಣವನ್ನ ಎನ್ ಐ […]
ಬಿಜೆಪಿ ಮುಖಂಡನ ಅಮಾನವೀಯ ಹತ್ಯೆ: ದುಷ್ಕರ್ಮಿಗಳನ್ನು ಶೀಘ್ರ ಬಂಧಿಸಿ ಶಿಕ್ಷಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ . ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ […]
ಪ್ರಧಾನಿ ಮೋದಿ ಭಾರತದ ಅಭಿವೃದ್ಧಿಯ ಪರ್ವಕ್ಕೆ ನಾಂದಿ ಹಾಡಿದ ಭರವಸೆಯ ನಾಯಕ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಉಡುಪಿ : ಭಾರತವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರ ಆಶಾಕಿರಣ. ಕಳೆದ 8 ವರ್ಷದಲ್ಲಿ ನರೇಂದ್ರ ಮೋದಿಯವರು ಸಮರ್ಥ ಮತ್ತು ಭರವಸೆಯ ನಾಯಕರಾಗಿ ಭಾರತದ ಅಭಿವೃದ್ಧಿಯ ಪರ್ವಕ್ಕೆ ನಾಂದಿ ಹಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದರು. ಬುಧವಾರ ಅವರು ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ದೇಶದ ಪ್ರಗತಿಗೆ ರಾಜಕೀಯ […]