ಮಣಿಪಾಲದಲ್ಲಿ ಮಾದಕದ್ರವ್ಯ ವ್ಯಸನ ತೊಡೆದುಹಾಕುವೆ : ಗೃಹಸಚಿವ ಬೊಮ್ಮಾಯಿ

ಕುಂದಾಪುರ:ಉಡುಪಿ, ಮಣಿಪಾಲ ಹಾಗೂ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿರುವ ಯುವಕರು ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಈಗಾಗಲೇ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಾದಕ ವ್ಯಸನವನ್ನು ಸಂಪೂರ್ಣವಾಗಿ ತೊಡೆದುಹಾಕಬೇಕು ಮತ್ತು ಮಾದಕ ವ್ಯಸನ ಮಾರಾಟ ಜಾಲವನ್ನು ಪತ್ತೆ ಹಚ್ಚಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ. ಇದಕ್ಕಾಗಿಯೇ ವಿಶೇಷ ಪೊಲೀಸರ ತಂಡವನ್ನು ರಚನೆ ಮಾಡಿದ್ದೇವೆ. ಇನ್ನು ಕೆಲವೇ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ಮಾಫಿಯಾವನ್ನು ನಿಯಂತ್ರಣ ಮಾಡುತ್ತೇವೆ  ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯ ಗೃಹಸಚಿವ […]