ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ: ಮಕ್ಕಳ ಅಸ್ಥಿ ಮಜ್ಜೆ ಕಸಿಯ ಯಶಸ್ಸಿನ ಸಂಭ್ರಮಾಚರಣೆ ಕಾರ್ಯಕ್ರಮ
ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಣಿಪಾಲದ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಭಾಗವಾಗಿರುವ ಮಕ್ಕಳ ರಕ್ತಶಾಸ್ತ್ರ ಮತ್ತು ಅಂಕೋಲಜಿ ವಿಭಾಗವು ಮಕ್ಕಳ ಅಸ್ಥಿಮಜ್ಜೆ ಕಸಿ ಸೌಲಭ್ಯದ ಯಶಸ್ಸನ್ನು ಆಚರಿಸುವ ಕಾರ್ಯಕ್ರಮವನ್ನು ಆಗಸ್ಟ್ 3 ರಂದು ನಗರದ ಓಶಿಯನ್ ಪರ್ಲ್ ಹೋಟೆಲಿನಲ್ಲಿ ಆಯೋಜಿಸಲಾಗಿತ್ತು. ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ. ಶರತ್ ಕುಮಾರ್ ರಾವ್ ಮಕ್ಕಳ ಅಸ್ಥಿಮಜ್ಜೆ ಕಸಿ ಕ್ಲಿನಿಕ್ ನ ಮಾಹಿತಿ ಕರಪತ್ರಗಳನ್ನು ಬಿಡುಗಡೆ ಮಾಡಿ ಮಾತನಾಡಿ ಅಸ್ಥಿಮಜ್ಜೆ ಕಸಿ ವಿವಿಧ ಬಗೆಯ […]
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮೊದಲ ಅರ್ಧ- ಹೊಂದಾಣಿಕೆಯ ಅಸ್ಥಿಮಜ್ಜೆಯ ಕಸಿ
ಮಣಿಪಾಲ: ಅಕ್ಯೂಟ್ ಮೈಲೋಯ್ಡ್ ಲ್ಯುಕೇಮಿಯಾ (ಒಂದು ರೀತಿಯ ರಕ್ತದ ಕ್ಯಾನ್ಸರ್) ರೋಗ ಪತ್ತೆಯಾದ 12 ವರ್ಷದ ಬಾಲಕನಿಗೆ ಮೊದಲ ಅರ್ಧ- ಹೊಂದಾಣಿಕೆಯ ಅಸ್ಥಿಮಜ್ಜೆಯ ಕಸಿಯನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಅಸ್ಥಿ ಮಜ್ಜೆಯ ಕಸಿಯು ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿಗಳ ತಜ್ಞ ತಂಡದಿಂದ ಮಾಡಲ್ಪಡುವ ಒಂದು ಸಂಕೀರ್ಣ ವೈದ್ಯಕೀಯ ಚಿಕಿತ್ಸೆಯಾಗಿದ್ದು, ಇದು ಕ್ಯಾನ್ಸರ್ ಯುಕ್ತ ಅಸ್ಥಿ ಮಜ್ಜೆಯನ್ನು ನಿರ್ಮೂಲನೆ ಮಾಡಿ, ಆರೋಗ್ಯಕರ ಅಸ್ಥಿ ಮಜ್ಜೆಯ ಕೋಶಗಳನ್ನು ವರ್ಗಾಹಿಸುವ ಪ್ರಕ್ರಿಯೆಯಾಗಿದೆ. ರೋಗಿಗೆ ಅಸ್ಥಿ ಮಜ್ಜೆಯನ್ನು ದಾನ ಮಾಡಲು ಪೂರ್ಣ […]