ವಿದ್ಯಾರ್ಥಿಗಳು ಬರೀ ವಿದ್ಯಾವಂತರಾದರೆ ಸಾಲದು, ಜ್ಞಾನವಂತರೂ ಆಗಬೇಕು – ಆಲ್ವಿನ್ ಆಂದ್ರಾದೆ
ಉದ್ಯಾವರ : ಓದುವುದು ಕೇವಲ ಪಠ್ಯ ಪುಸ್ತಕಗಳಿಗೆ ಮಾತ್ರ ಸೀಮಿತವಾಗಿರದೇ ಇತರ ಪುಸ್ತಕಗಳನ್ನು ಓದುವ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಪಠ್ಯ ಪುಸ್ತಕಗಳು ವಿದ್ಯಾರ್ಥಿಗಳನ್ನು ವಿದ್ಯಾವಂತರನ್ನಾಗಿಸಿದರೆ, ಇತರ ಪುಸ್ತಕಗಳು ಜ್ಞಾನವಂತರನ್ನಾಗಿಸುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾವಂತರಾಗುವ ಜೊತೆಗೆ ಜ್ಞಾನವಂತರೂ ಆಗಬೇಕಾದ ಅನಿವಾರ್ಯತೆ ವಿದ್ಯಾರ್ಥಿಗಳಿಗಿದೆ. ಪಠ್ಯ ಪುಸ್ತಕದ ಜೊತೆಗೆ ಇತರ ಪುಸ್ತಕಗಳನ್ನು ಓದುವುದರಿಂದ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆ ಸಾಧ್ಯ ಎಂದು ಶಿವಮೊಗ್ಗ ಜಿಲ್ಲೆಯ ಸಾಗರ ಕ್ಷೇತ್ರ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಲ್ವಿನ್ ಆಂದ್ರಾದೆ ಹೇಳಿದರು. ಭಾನುವಾರದಂದು ಸೇವಾ ಮತ್ತು ಸಾಂಸ್ಕೃತಿಕ […]