ಇಂದು ಬೂಸ್ಟರ್ ಡೋಸ್ ಲಸಿಕಾ ಮೇಳ: ಕೋವಿಶೀಲ್ಡ್ ಲಭ್ಯ

ಉಡುಪಿ: ಕೋವಿಡ್-19 ನಾಲ್ಕನೇ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 18 ರಂದು ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ. ಕೋವಿಶೀಲ್ಡ್ ಪ್ರಥಮ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರಿಗೆ 2 ನೇ ಡೋಸ್ ಕೋವಿಶೀಲ್ಡ್ ಲಸಿಕೆ, ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರು, 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆಯಬಹುದಾಗಿದೆ. 2ನೇ ಡೋಸ್ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ […]

ಇಂದು ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಲಸಿಕಾ ಮೇಳ

ಉಡುಪಿ: ಕೋವಿಡ್-19 ನಾಲ್ಕನೇ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 11 ರಂದು ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ. ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರು, 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆಯಲು ಮತ್ತು 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ತಿಂಗಳು ಪೂರೈಸಿದವರು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಲಸಿಕಾ ಡೋಸ್ (ಬೂಸ್ಟರ್ ಡೋಸ್) ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ […]

ಜ. 4 ರಂದು ಕೋವಾಕ್ಸಿನ್ ಮುನ್ನೆಚ್ಚರಿಕಾ ಡೋಸ್ ಲಸಿಕಾ ಮೇಳ

ಉಡುಪಿ: ಚೀನಾ, ರಿಪಬ್ಲಿಕ್ ಆಫ್ ಕೊರಿಯಾ, ಜಪಾನ್, ಯು.ಎಸ್.ಎ, ಬ್ರೆಝಿಲ್ ದೇಶಗಳಲ್ಲಿ ಈಗಾಗಲೇ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ನಾಲ್ಕನೆ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 4 ರಂದು ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಕೋವಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ. ಕೋವಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರು, 2ನೇ ಡೋಸ್ ಕೋವಾಕ್ಸಿನ್ ಲಸಿಕೆ ಪಡೆಯಲು ಮತ್ತು 2ನೇ ಡೋಸ್ ಕೋವಾಕ್ಸಿನ್ ಲಸಿಕೆ ಪಡೆದು 6 ತಿಂಗಳು ಪೂರೈಸಿದವರು […]

2 ಡೋಸ್ ಕೋವಿಡ್ ಲಸಿಕೆ ಪಡೆದಿರುವವರು ಬೂಸ್ಟರ್ ಡೋಸ್ ಹಾಕಿಸಿಕೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾರಾವ್ 

ಉಡುಪಿ: ಜನಸಾಮಾನ್ಯರು ಕೋವಿಡ್ ಸಾಂಕ್ರಾಮಿಕ ರೋಗದ ಬಗ್ಗೆ ಆತಂಕ ಪಡದೇ ಸರಳ ಮುನ್ನೆಚ್ಚರಿಕಾ ಕ್ರಮಗಳಾದ ಸಾಮಾಜಿಕ ಅಂತರ ಕಾಪಾಡುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು, ಮಾಸ್ಕ್ ಗಳನ್ನು ಧರಿಸುವುದು ಸೇರಿದಂತೆ ಮತ್ತಿತರ ಕ್ರಮಗಳನ್ನು ತಪ್ಪದೇ ಪಾಲಿಸಬೇಕು. ಈಗಾಗಲೇ 2 ಡೋಸ್ ಕೋವಿಡ್ ಲಸಿಕೆ ಪಡೆದಿರುವವರು ಬೂಸ್ಟರ್ ಡೋಸ್ ಅನ್ನು ಪಡೆಯಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ತಿಳಿಸಿದರು. ಅವರು ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಕೋವಿಡ್ ಮುನ್ನೆಚ್ಚರಿಕೆ ಮತ್ತು ತಾಂತ್ರಿಕ ಸಲಹಾ ಸಮಿತಿ ಸಭೆಯ […]

ಉಡುಪಿ: 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಮುಂಜಾಗ್ರತಾ ಡೋಸ್ ಪಡೆಯುವುದು ಅಗತ್ಯ

ಉಡುಪಿ: ಚೀನಾ, ರಿಪಬ್ಲಿಕ್ ಆಫ್ ಕೊರಿಯಾ, ಜಪಾನ್, ಯು.ಎಸ್.ಎ ಹಾಗೂ ಬ್ರೆಝಿಲ್ ದೇಶಗಳಲ್ಲಿ ಈಗಾಗಲೇ ಕೋವಿಡ್ – 19 4ನೇ ಅಲೆ ಪ್ರಕರಣಗಳು ಹೆಚ್ಚುತ್ತಿದ್ದು, ಇದರಿಂದ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಮುಂಜಾಗ್ರತಾ ಡೋಸ್ ಪಡೆಯುವುದು ಅಗತ್ಯವಾಗಿದೆ. ಜಿಲ್ಲೆಯಲ್ಲಿರುವ 18 ವರ್ಷ ಮೇಲ್ಪಟ್ಟವರಲ್ಲಿ 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ತಿಂಗಳು ದಾಟಿದವರು ಸಮೀಪದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯ ಬಗ್ಗೆ ಖಚಿತಪಡಿಸಿಕೊಂಡು ದಿನಾಂಕ ಮತ್ತು ಸಮಯವನ್ನು […]