18 ವರ್ಷ ಮೇಲ್ಪಟ್ಟ ಬೂಸ್ಟರ್ ಡೋಸ್ ಅರ್ಹತೆಯುಳ್ಳವರಿಗೆ ಬಹು ಆಯ್ಕೆ ಲಭ್ಯ: ಕೋರ್ಬೆವಾಕ್ಸ್ ಪರಿಗಣಿಸಲು ಕೇಂದ್ರ ಮಾರ್ಗಸೂಚಿ

ನವದೆಹಲಿ: 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಜನರಿಗೆ ಕೋರ್ಬೆವಾಕ್ಸ್ ನೊಂದಿಗೆ ಮುನ್ನೆಚ್ಚರಿಕಾ(ಬೂಸ್ಟರ್) ಡೋಸ್ ನ ಭಿನ್ನ ಆಯ್ಕೆಯು ಲಭ್ಯವಿರುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮಾತನಾಡಿ, 18 ವರ್ಷ ಮೇಲ್ಪಟ್ಟ ಜನರಿಗೆ ಕೋವಾಕ್ಸಿನ್ ಅಥವಾ ಕೋವಿಶೀಲ್ಡ್ ಲಸಿಕೆಗಳ ಎರಡನೇ ಡೋಸ್ ನೀಡಿದ ದಿನಾಂಕದಿಂದ ಆರು ತಿಂಗಳ ನಂತರ ಮುನ್ನೆಚ್ಚರಿಕಾ ಡೋಸ್ ಆಗಿ ಕೋರ್ಬೆವಾಕ್ಸ್ ಲಭ್ಯವಿರುತ್ತದೆ ಎಂದು ಹೇಳಿದ್ದಾರೆ. ಅಂದರೆ, ಈ ಹಿಂದೆ ಕೋವಾಕ್ಸಿನ್ ಅಥವಾ ಕೋವಿಶೀಲ್ಡ್ ನ ಎರಡೂ ಡೋಸೇಜ್ […]

ಜಿಲ್ಲಾ ವಕೀಲರ ಸಂಘ: ಬೂಸ್ಟರ್ ಡೋಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ: ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದೊಂದಿಗೆ ಉಡುಪಿ ವಕೀಲರ ಸಂಘದ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರಿಗೆ ಜುಲೈ 21ರಂದು ಆಯೋಜಿಸಿದ “ಬೂಸ್ಟರ್ ಡೋಸ್ ಲಸಿಕಾ ಕಾರ್ಯಕ್ರಮ” ಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಾಂತವೀರ್ ಶಿವಪ್ಪ ಇವರು ಚಾಲನೆ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಮತಿ ಶರ್ಮಿಳಾ, ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಾತ್ವಿಕ್ ಭಟ್, ವಕೀಲರ […]

ಕೋವಿಡ್ ವೈರಸ್ ವಿರುದ್ಧ ಕ್ಷೀಣಿಸುತ್ತಿರುವ ಪ್ರತಿರಕ್ಷಣೆ: ಕೋವಿಡ್ ಬೂಸ್ಟರ್ ಡೋಸ್ ಅಗತ್ಯ ಎಂದ ಸರಕಾರ

ನವದೆಹಲಿ: ಕೋವಿಡ್ ವೈರಸ್ ವಿರುದ್ಧ ದೇಹದ ಪ್ರತಿರಕ್ಷಣೆ ಕ್ಷೀಣಿಸುತ್ತಿರುವುದರಿಂದ ಮುನ್ನೆಚ್ಚರಿಕಾ(ಬೂಸ್ಟರ್) ಡೋಸ್ ಅಗತ್ಯವಿದೆ ಎಂದು ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ (ಎನ್‌ಟಿಜಿಐ) ಕೋವಿಡ್ -19 ವರ್ಕಿಂಗ್ ಗ್ರೂಪ್‌ನ ಮುಖ್ಯಸ್ಥ ಡಾ.ಎನ್.ಕೆ. ಅರೋರಾ ಹೇಳಿದ್ದಾರೆ. ಎಐಆರ್ ನ್ಯೂಸ್‌ನೊಂದಿಗೆ ಮಾತನಾಡಿದ ಅವರು, ಹಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿರುವ ಕಾರಣ ಮುನ್ನೆಚ್ಚರಿಕಾ ಡೋಸ್ ನ ಪ್ರಮಾಣವನ್ನು ಮಿಷನ್ ಮೋಡ್‌ನಲ್ಲಿ ಹೆಚ್ಚಿಸಬೇಕು. ಕೋವಿಡ್ ಪ್ರಕರಣಗಳು ತಗ್ಗಿರುವುದರಿಂದ ಜನರ ಮನಸ್ಸಿನಲ್ಲಿ ಉದಾಸೀನತೆ ಮನೆಮಾಡಿದೆ. ಆದರೆ ನಾವು ರೋಗದ ವಿರುದ್ದ […]

18 ವರ್ಷ ಮೇಲ್ಪಟ್ಟವರಿಗೆ ಜುಲೈ 15 ರಿಂದ 75 ದಿನಗಳವರೆಗೆ ಉಚಿತ ಕೋವಿಡ್-19 ಬೂಸ್ಟರ್ ಡೋಸ್

ಮುಂಬೈ: 18 ವರ್ಷ ಮೇಲ್ಪಟ್ಟ ನಾಗರಿಕರಿಗೆ ಶುಕ್ರವಾರದಿಂದ ಮುಂದಿನ 75 ದಿನಗಳವರೆಗೆ ಉಚಿತ ಕೋವಿಡ್-19 ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಬುಧವಾರ ಪ್ರಕಟಿಸಿದ್ದಾರೆ. ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ‘ಆಜಾದಿ ಕಾ ಅಮೃತ್ ಮಹೋತ್ಸವ’ ಅಂಗವಾಗಿ ಬೂಸ್ಟರ್ ಡೋಸ್ ಅಭಿಯಾನ ಅನ್ನು ಹೆಚ್ಚಿಸುವ ಗುರಿಯನ್ನು ಇದು ಹೊಂದಿದೆ. ವಿಶೇಷ 75 ದಿನಗಳ ಅಭಿಯಾನದಡಿಯಲ್ಲಿ, 18 ರಿಂದ 59 ವಯಸ್ಸಿನ ಎಲ್ಲಾ ವಯಸ್ಕರಿಗೆ ಜುಲೈ 15 […]

ಕೋವಿಡ್ 19: ಪ್ರತೀ ಬುಧವಾರದಂದು ಬೂಸ್ಟರ್ ಡೋಸ್ ಲಸಿಕಾ ಮೇಳ ಆಯೋಜನೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಮೇಳವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಆಶಾ ಕಾರ್ಯಕರ್ತೆಯರು ಎಲ್ಲಾ ಮನೆಗಳಿಗೆ ಭೇಟಿ ನೀಡಿ, 60 ವರ್ಷ ಮೇಲ್ಪಟ್ಟವರಲ್ಲಿ ಮುನ್ನೆಚ್ಚರಿಕಾ ಡೋಸ್ ಪಡೆಯಲು ಬಾಕಿ ಇರುವವರನ್ನು ಗುರುತಿಸಿ, ಬುಧವಾರ ನಡೆಯುವ ಲಸಿಕಾ ಮೇಳಕ್ಕೆ ಬರಲು ಪ್ರೇರೇಪಿಸಬೇಕು. ಆಸ್ಪತ್ರೆಗೆ ಬರಲು ಸಾಧ್ಯವಾಗದ ಹಾಗೂ ಹಾಸಿಗೆ ಹಿಡಿದಿರುವ 60 ವರ್ಷ ಮೇಲ್ಪಟ್ಟವರಿದ್ದಲ್ಲಿ ಅವರಿಗೆ ಮೊಬೈಲ್ ಲಸಿಕಾ ಶಿಬಿರ ವ್ಯವಸ್ಥೆ ಮಾಡಿ, ಲಸಿಕೆ ನೀಡಬೇಕು. ಪಂಚಾಯತ್ ವ್ಯಾಪ್ತಿಯಲ್ಲಿ ವೈದ್ಯಾಧಿಕಾರಿಗಳೊಂದಿಗೆ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮ ಕಾರ್ಯಪಡೆ ಸದಸ್ಯರ […]