ಅಟಲ್ ಉತ್ಸವ: ಮುಂದಿನ ವಿಧಾನಸಭಾ ಚುನಾವಣೆಗೆ ಮುನ್ನುಡಿಯಾದ ಐತಿಹಾಸಿಕ ‘ಬೂತ್ ಸಂಗಮ’ ಕಾರ್ಯಕ್ರಮ

ಉಡುಪಿ: ಬಿಜೆಪಿಯ ವಿಧಾನಸಭಾ ಚುನಾವಣೆಯ ಮುನ್ನುಡಿಯಾಗಿ ನಗರದ ಎಂಜಿಎಂ ಕಾಲೇಜು ಮೈದಾನದಲ್ಲಿ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 98 ನೇ ಜನ್ಮದಿನದ ಅಂಗವಾಗಿ ಅಟಲ್ ಉತ್ಸವ ಆಯೋಜಿಸಲಾಗಿದ್ದು ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಐತಿಹಾಸಿಕ ‘ಬೂತ್ ಸಂಗಮ’ ಕಾರ್ಯಕ್ರಮ ಭಾನುವಾರ ನಡೆಯಿತು. ಉಡುಪಿ ವಿಧಾನಸಭಾ ಕ್ಷೇತ್ರದ ‘ಬೂತ್ ಸಂಗಮ’ದಲ್ಲಿ ನಗರ ಮತ್ತು ಗ್ರಾಮಾಂತರ ಭಾಗದ 226 ಮತಗಟ್ಟೆಗಳಿಂದಲೂ ಕಾರ್ಯಕರ್ತರು ಭಾಗವಹಿಸಿ ಇತಿಹಾಸ ನಿರ್ಮಿಸಿದರು.   ಮುಂಬರುವ ವಿಧಾನಸಭೆಯಲ್ಲಿ ಪಕ್ಷ ಸಂಘಟನೆಯ ಬಗ್ಗೆ ಮಂಥನ ನಡೆಸಲಾಯಿತು. […]