ತವಾಂಗ್ ನಲ್ಲಿ 300 ಕ್ಕೂ ಹೆಚ್ಚು ಚೀನೀ ಸೈನಿಕರ ಜೊತೆ ಕಾದಾಡಿ ಹಿಮ್ಮೆಟಿಸಿದ ಭಾರತೀಯ ಸೈನಿಕರು

ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಭಾರತ ಮತ್ತು ಚೀನಾದ ಸೈನಿಕರ ನಡುವಿನ ಘರ್ಷಣೆ ಬಗ್ಗೆ ಮಂಗಳವಾರ ಸಂಸತ್ತಿನಲ್ಲಿ ಚರ್ಚೆಗೆ ಒತ್ತಾಯಿಸಲಾಗಿದ್ದು, ಗಡಿಯಲ್ಲಿನ ಪರಿಸ್ಥಿತಿಯ ಕುರಿತು ಹಲವಾರು ಕಾಂಗ್ರೆಸ್ ಸಂಸದರು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡುವಂತೆ ಒತ್ತಾಯಿಸಿದರು. ಡಿಸೆಂಬರ್ 9 ರಂದು ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನ ಯಾಂಗ್ಟ್ಸೆ ಪ್ರದೇಶದ ಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸುವ ಚೀನಾದ ಪಿಎಲ್‌ಎಯ ಪ್ರಯತ್ನಗಳನ್ನು ಭಾರತೀಯ ಸೇನೆ ಧೈರ್ಯದಿಂದ ತಡೆದಿದೆ ಮತ್ತು ಅದನ್ನು ದೃಢವಾಗಿ ಎದುರಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ […]