ದಿ ಕೇರಳ ಸ್ಟೋರಿ: ಆರನೇ ದಿನದಂದು 68.86 ಕೋಟಿ ರೂ ಗಳಿಕೆ

ಕೇರಳದ ಹಿಂದೂ ಮಹಿಳೆಯ ಮತಾಂತರ ಮತ್ತು ಭಯೋತ್ಪಾದಕ ಸಂಘಟನೆ ಐಸಿಸ್ ಸುತ್ತ ಸುತ್ತುವ ಅದಾ ಶರ್ಮಾ ಅಭಿನಯದ ದಿ ಕೇರಳ ಸ್ಟೋರಿ ಚಲಚಿತ್ರವು ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿದ್ದು, ಆರನೇ ದಿನಕ್ಕೆ 60 ಕೋಟಿ ಮೈಲಿಗಲ್ಲನ್ನು ದಾಟಿದೆ. ಸುದೀಪ್ತೋ ಸೇನ್ ನಿರ್ದೇಶನ ಹಾಗೂ ವಿಪುಲ್ ಶಾಹ್ ನಿರ್ಮಾಣದ ಈ ಚಿತ್ರವು ಮೇ 5 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಕೇರಳ ಸ್ಟೋರಿ ಮೊದಲ ದಿನವೇ 8 ಕೋಟಿ ಗಳಿಸಿತ್ತು. ಇದು 2023 ರಲ್ಲಿ ಶಾರುಖ್ ಖಾನ್ […]

ಇತಿಹಾಸ ಸೃಷ್ಟಿಸಿದ ಕಾಂತಾರ: 15 ದಿನಗಳಲ್ಲಿ ವಿಶ್ವದಾದ್ಯಂತ 100 ಕೋಟಿ ರೂ ಗಳಿಕೆ

ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಸಂಚಲನ ಸೃಷ್ಟಿಸಿದ ಸಿನಿಮಾಗಳ ಪೈಕಿ ಕಾಂತಾರವೂ ಒಂದಾಗಿದ್ದು, ಸಿನಿಮಾವು 15 ದಿನಗಳಲ್ಲಿ ವಿಶ್ವದಾದ್ಯಂತದ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ಗಳಿಕೆ ಮಾಡಿದೆ. ಭಾರತದ ನಿವ್ವಳ ಸಂಗ್ರಹ 78.14 ಕೋಟಿ ರೂಗಳಾಗಿವೆ. ಇದಕ್ಕೂ ಮುಂಚೆ ಕನ್ನಡದ 5 ಚಲನಚಿತ್ರಗಳು ಈ ಇತಿಹಾಸ ನಿರ್ಮಿಸಿದ್ದು, ಕಾಂತಾರ ಸದ್ಯ 6 ನೇ ಸ್ಥಾನದಲ್ಲಿದೆ. ವಿಶ್ವಾದ್ಯಂತ 1207 ಕೋಟಿ ರೂ ಗಳಿಸುವ ಮೂಲಕ ಹೊಂಬಾಳೆ ಬ್ಯಾನರ್ಸ್ ನ ಯಶ್ ಅಭಿನಯದ ಕೆಜಿಎಫ್ 2 ಅಗ್ರಸ್ಥಾನದಲ್ಲಿದ್ದರೆ, ಇದರ ಹಿಂದಿನ […]