ಅಂತ್ಯೋದಯ/ಬಿಪಿಎಲ್ ಕಾರ್ಡುದಾರರಿಗೆ ಬ್ಯಾಂಕ್ ಖಾತೆ ತೆರೆಯಲು ಇಂದಿನಿಂದ ಶಿಬಿರಗಳ ಆಯೋಜನೆ
ಉಡುಪಿ: ರಾಜ್ಯ ಸರ್ಕಾರದ ಆದೇಶದಂತೆ ಅಂತ್ಯೋದಯ(ನಾಲ್ಕು ಅಥವಾ ನಾಲ್ಕಕ್ಕಿಂತ ಹೆಚ್ಚು ಸದಸ್ಯರು) ಹಾಗೂ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿ 5 ಕೆ.ಜಿ ಆಹಾರ ಧಾನ್ಯವನ್ನು ಸೇರಿಸಿ ಪ್ರತಿ ತಿಂಗಳು ಪ್ರತಿ ಫಲಾನುಭವಿಗೆ ತಲಾ 10 ಕೆಜಿ ಆಹಾರ ಧಾನ್ಯ ಉಚಿತವಾಗಿ ವಿತರಿಸಲು ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಬಿಡ್‌ದಾರರು ಆಹಾರ ಧಾನ್ಯವನ್ನು ಸರಬರಾಜು ಮಾಡುವವರೆಗೆ ಅಂತ್ಯೋದಯ ಅನ್ನ ಯೋಜನೆ ಹಾಗೂ ಆದ್ಯತಾ ಪಡಿತರ ಚೀಟಿಗಳ ಪ್ರತಿ […]
ಸರ್ಕಾರಿ ನೌಕರರು ಮತ್ತು ಐಷಾರಾಮಿ ಕಾರು ಮಾಲೀಕರ ಬಳಿಯೂ ಬಿಪಿಎಲ್ ಕಾರ್ಡ್? ಇಲಾಖಾ ಕಾರ್ಯಾಚರಣೆಯಲ್ಲಿ ಗೋಲ್ ಮಾಲ್ ಬಯಲು!!
ಬೆಂಗಳೂರು: ಕಳೆದ ಎರಡು ವರ್ಷಗಳಲ್ಲಿ ಅಕ್ರಮ ಪಡಿತರ ಚೀಟಿದಾರರ ವಿರುದ್ಧ ರಾಜ್ಯಾದ್ಯಂತ ನಡೆಸಿದ ಕಾರ್ಯಾಚರಣೆಯಲ್ಲಿ ಸರ್ಕಾರಿ ನೌಕರರು ಮತ್ತು ಐಷಾರಾಮಿ ಕಾರು ಮಾಲೀಕರು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿರುವುದು ಕಂಡುಬಂದಿದೆ. ಜನವರಿ 2021 ರಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಪ್ರಾರಂಭಿಸಿದ ಕಾರ್ಯಾಚರಣೆಯಲ್ಲಿ 13 ಕೋಟಿ ರೂ ದಂಡವನ್ನು ಸಂಗ್ರಹಿಸಿದೆ, ಇದರಲ್ಲಿ 11 ಕೋಟಿ ರೂ.ಗಳನ್ನು 17,521 ಸರ್ಕಾರಿ ನೌಕರರಿಂದಲೇ ಸಂಗ್ರಹಿಸಲಾಗಿದೆ. ತಾವು ಫಲಾನುಭವಿಗಳಾಗಲು ಅನರ್ಹವಾಗಿದ್ದರೂ ಅಂತ್ಯೋದಯ ಅನ್ನ ಯೋಜನೆ (ಎವೈವೈ) ಮತ್ತು ಆದ್ಯತಾ […]
ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ವಿತರಣೆ
ಉಡುಪಿ: ಕೇಂದ್ರ ಸರ್ಕಾರದ ‘ಆಜಾದಿ ಕಾ ಅಮೃತ ಮಹೋತ್ಸವ್’ ಕಾರ್ಯಕ್ರಮದ ಆಚರಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಜೊತೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಸಾರ್ವಜನಿಕರಿಗೆ ಉಚಿತ ಪಡಿತರ ವಿತರಿಸುವ ಯೋಜನೆ ಜಾರಿಗೊಳಿಸಿರುತ್ತದೆ. ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಎನ್.ಎಫ್.ಎಸ್.ಎ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಬಿಡುಗಡೆಯಾದ ಆಹಾರ ಧಾನ್ಯವನ್ನು ಏಪ್ರಿಲ್ ನಿಂದ ಅಂತ್ಯೋದಯ (ಎ.ಎ.ವೈ) ಚೀಟಿದಾರರಿಗೆ ಎನ್.ಎಫ್.ಎಸ್.ಎ ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿ ಹಾಗೂ […]
ಪಡಿತರ ಚೀಟಿಗೆ ಕೆವೈಸಿ ಅಪ್ಲೋಡ್ ಮಾಡಲು ಸೂಚನೆ: ಜಿಲ್ಲಾಧಿಕಾರಿ
ಉಡುಪಿ, ಮೇ 27: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ನಿಯಮದಂತೆ ಆಹಾರ ಧಾನ್ಯ ಪಡೆಯುತ್ತಿರುವ (ಬಿಪಿಎಲ್, ಎಎವೈ & ಎಪಿಎಲ್) ಕಾರ್ಡುದಾರರು ಹೊಸದಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಕಾರ್ಡಿನಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿಯನ್ನು ಅಪ್ಲೋಡ್ ಮಾಡಬೇಕಾಗಿದ್ದು, ನ್ಯಾಯಬೆಲೆ ಅಂಗಡಿಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ತಂತ್ರಾಂಶದಲ್ಲಿ ಮಾಹಿತಿ ಅಪ್‍ಲೋಡ್ ಮಾಡುವಾಗ ಪಡಿತರ ಕಾರ್ಡಿನ ಕುಟುಂಬದ ಹಿರಿಯ ಮಹಿಳಾ ಸದಸ್ಯರನ್ನು ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಬೇಕು ಮತ್ತು ಹೊಸ ಕುಟುಂಬದ ಮುಖ್ಯಸ್ಥರೊಂದಿಗೆ (ಹಿರಿಯ ಮಹಿಳಾ ಸದಸ್ಯ) ಇತರೆ ಸದಸ್ಯರ ಸಂಬಂಧದ […]