ಕನ್ನರ್ಪಾಡಿ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಇತಿಹಾಸ ಪ್ರಸಿದ್ಧ ಕನ್ನರ್ಪಾಡಿ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕುಂಭಾಭಿಷೇಕ ಮಾರ್ಚ್ 31ರಿಂದ ಏಪ್ರಿಲ್ 10ರ ವರೆಗೆ ನಡೆಯುವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪೂರ್ವಭಾವಿ ಸಭೆ ದೇವಳದ ವಠಾರದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆಯನ್ನು ಶ್ರೀದೇವಿಗೆ ಸಮರ್ಪಿಸಿ ಬಿಡುಗಡೆಗೊಳಿಸಲಾಯಿತು. ದೇವಸ್ಥಾನದ ಆಡಳಿತಾಧಿಕಾರಿ ಡಾ. ರೋಷನ್ ಕುಮಾರ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿ ಕೆ. ಕೃಷ್ಣಮೂರ್ತಿ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಸಂಜೀವ ಎ., ದೇವಸ್ಥಾನದ ಅರ್ಚಕ ಗುರುರಾಜ ಉಪಾಧ್ಯಾಯ, ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರಾದ ನಾರಾಯಣ […]