ಬ್ರಹ್ಮಗಿರಿ-ಅಜ್ಜರಕಾಡು ಕಳಪೆ ರಸ್ತೆ ಜೆಸಿಬಿ ಮೂಲಕ ತೆರವು

ಉಡುಪಿ: ಕೆಲವು ತಿಂಗಳುಗಳ ಹಿಂದೆಯಷ್ಟೆ ಡಾಂಬರೀಕರಣಗೊಂಡಿದ್ದ ಬ್ರಹ್ಮಗಿರಿಯಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆವರೆಗಿನ ಮುಖ್ಯ ರಸ್ತೆಯಲ್ಲಿ ಹೊಂಡ ಗುಂಡಿ ಬಿದ್ದಿದ್ದು, ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ವಾಹನಗಳು ಸಂಚರಿಸಲಾಗದ ಪರಿಸ್ಥಿತಿ ಎದುರಾಗಿದೆ. ನಗರಸಭೆ ಪರ್ಯಾಯ ಮಹೋತ್ಸವದ ಅನುದಾನದಿಂದ ಈ ರಸ್ತೆಗೆ 35 ಲಕ್ಷ ಹಣ ಮಂಜೂರು ಮಾಡಿತ್ತು. ಗುತ್ತಿಗೆದಾರ ಕಳಪೆ ಕಾಮಗಾರಿ ನಡೆಸಿ, ಇತ್ತೀಚೆಗೆ ಅದರ ಮೇಲೆ ತೇಪೆ ಹಚ್ಚಿಸಿದ್ದರು.ಇದರ ವಿರುದ್ಧ ಸಮಾಜಸೇವಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೂ ಮುಂದಾಗಿದ್ದರು. ಇಂದು ನಗರಸಭೆ ಆಯುಕ್ತ ರಾಯಪ್ಪ ನೇತೃತ್ವದಲ್ಲಿ ಈ ರಸ್ತೆಯ ತೇಪೆಯನ್ನು ಜೆಸಿಬಿ […]