ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ “ಬ್ರಹ್ಮಕಲಶೋತ್ಸವ”
ಹಿರಿಯಡ್ಕ: ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಮೇ.24 ರಂದು ನಡೆದ ಧಾರ್ಮಿಕ ಸಭೆಯನ್ನು ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ ಉದ್ಘಾಟಿಸಿ ಮಾತನಾಡಿದರು. ನಮ್ಮ ಕರೆಯುವಿಕೆಗೆ ಭಗವಂತನು ಸಮೀಪಿಸುತ್ತಾನೆ. ಕಂಠದಿಂದ ಬರುವ ಕೂಗಿಗಿಂತ ಹೃದಯದಿಂದ ಬರುವ ಕೂಗಿಗೆ ಭಗವಂತ ಒಲಿಯುತ್ತಾನೆ. ಪ್ರತಿಯೊಬ್ಬರೂ ದೇವರನ್ನು ಧ್ಯಾನದಿಂದ ಸ್ತುತಿಸಿದಾಗ ಭಗವಂತನ ಅನುಗ್ರಹ ಪ್ರಾಪ್ತಿಯಾಗುತ್ತದೆ. ಸುವ್ಯವಸ್ಥೆಯಲ್ಲಿ ಸಮಾಜ ಮುನ್ನಡೆಯಲು ಭಗವಂತನ ಅನುಗ್ರಹ ಅತ್ಯಗತ್ಯ. ಕಾಲಕಾಲಕ್ಕೆ ಮಳೆ ಬೆಳೆ ನೀಡುವ ಮೂಲಕ ಪ್ರತಿಯೊಬ್ಬರಿಗೂ ಬದುಕಲು ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾನೆ. […]