ಎ.8 ರಿಂದ ಸಗ್ರಿ ದೇವಳದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲೋತ್ಸವ

ಉಡುಪಿ: ಸಗ್ರಿ ಶ್ರೀವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎ.8 ರಿಂದ 11ರವರೆಗೆ ನವನಿರ್ಮಿತ ಶ್ರೀನಾಗದೇವರ ಗುಡಿ ಸಮರ್ಪಣೆ, ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ನಾಗಮಂಡಲೋತ್ಸವವು ಪಾಡಿಗಾರು ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಸಗ್ರಿ ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬ್ರಹ್ಮ ಕಲಶೋತ್ಸವ, ನಾಗಮಂಡಲೋತ್ಸವ ಸಮಿತಿ ಅಧ್ಯಕ್ಷರು ಆಗಿರುವ ಶಾಸಕ ಕೆ.ರಘುಪತಿ ಭಟ್, ಪ್ರತಿದಿನ ನಡೆಯುವ ಧರ್ಮಸಭೆಗಳಲ್ಲಿ ಅನೇಕ ಮಠಾಧೀಶರು, ಮಂತ್ರಿಗಳು, ಜನಪ್ರತಿನಿಧಿಗಳು, ಉದ್ಯಮಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸುವರು. ಆ ಬಳಿಕ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ […]