ಕನ್ನರ್ಪಾಡಿ ಶ್ರೀ ಜಯದುರ್ಗಾ ಪರಮೇಶ್ವರೀ ದೇಗುಲದ ಬ್ರಹ್ಮಕುಂಭಾಭಿಷೇಕ

ಉಡುಪಿ: ಕನ್ನರ್ಪಾಡಿಯ ಜಯದುರ್ಗಾ ಪರಮೇಶ್ವರಿ ಸಮಸ್ತ ಸಜ್ಜನರ ದುಃಖ, ದುರಿತಗಳನ್ನು ಪರಿಹಾರ ಮಾಡುವ ಶಕ್ತಿ ದೇವತೆ ಎಂದು ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ಸ್ವಾಮೀಜಿ ಹೇಳಿದರು. ಕನ್ನರ್ಪಾಡಿ ಶ್ರೀ ಜಯದುರ್ಗಾ ಪರಮೇಶ್ವರೀ ದೇಗುಲದ ಬ್ರಹ್ಮಕುಂಭಾಭಿಷೇಕದ ಪ್ರಯುಕ್ತ ದೇಗುಲದ ಶ್ರೀ ಜಯದುರ್ಗಾ ಮಂಟಪದಲ್ಲಿ ಬುಧವಾರ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ಜೀವನದಲ್ಲಿ ಆಧ್ಯಾತ್ಮಿಕತೆ ಅಳವಡಿಸಿಕೊಂಡಲ್ಲಿ ನೆಮ್ಮದಿ ಸಾಧಿಸಲು ಸಾಧ್ಯ. ಆಧ್ಯಾತ್ಮಿಕತೆಯ ಚಿಂತನೆ ಬಹಳಷ್ಟು ಆಗಬೇಕಿದೆ. ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ಕ್ಷೇತ್ರವು ಕೋವಿಡ್ ಸಂದರ್ಭದಲ್ಲಿಯೂ ಬಡವರ ಹಸಿವನ್ನು […]