ಕೋಟೇಶ್ವರ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಮ್ಮೇಳನಕ್ಕೆ ಸಿಎಂ ಚಾಲನೆ

ಕುಂದಾಪುರ: ಹಿಂದೂ ಧರ್ಮದ ಧಾರ್ಮಿಕ ಪರಿಪಾಲನೆಗೆ ಸಹಕಾರ ನೀಡಿ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಬ್ರಾಹ್ಮಣ ಸಮುದಾಯದಿಂದ ಸಮಾಜಕ್ಕೆ ಸಾಕಷ್ಟು ಕೊಡುಗೆಗಳು ಸಂದಿದೆ. ಸಾಹಿತ್ಯ, ಕಲೆ, ಶಿಕ್ಷಣ ಸೇರಿದಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಉಲ್ಲೇಖನೀಯ ಕೊಡುಗೆಗಳಿವೆ. ಸನಾತನ ಪರಂಪರೆ, ವೇದ, ಉಪನಿಷತ್, ದೇವಾಲಯಗಳ ರಕ್ಷಣೆಯ ಜೊತೆಯಲ್ಲಿ ಹಿಂದೂ ಸಮಾಜದ ಜಾಗೃತಿಗಾಗಿ ಬ್ರಾಹ್ಮಣ ಸಮುದಾಯದ ಕೊಡುಗೆ ಅಪಾರವಾದುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಅವರು ಇಲ್ಲಿನ ಕೋಟೇಶ್ವರದ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿನ ಡಾ.ವಿ.ಎಸ್.ಆಚಾರ್ಯ […]