ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಬಾಳು-ಸಮಪಾಲು ಪರಿಕಲ್ಪನೆಯ ಹರಿಕಾರ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ, ಸಮಬಾಳು-ಸಮಪಾಲು ಲಭಿಸಬೇಕೆಂಬ ಪರಿಕಲ್ಪನೆಯೊಂದಿಗೆ ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಬ್ರಹ್ಮಶ್ರೀ ನಾರಾಯಣ ಗುರು ದೊಡ್ಡ ಕ್ರಾಂತಿಯನ್ನೇ ಶಾಂತಿಮಾರ್ಗದಲ್ಲಿ ರಕ್ತಕ್ರಾಂತಿ ಇಲ್ಲದೇ ಮಾಡುವುದರೊಂದಿಗೆ ಸಮಾಜದಲ್ಲಿ ಸುಧಾರಣೆಯನ್ನು ತಂದಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಗುರುವಾರ ನಗರದ ಬನ್ನಂಜೆ ಶ್ರೀ ನಾರಾಯಣ ಗುರು ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಲ್ಲವರ ಸೇವಾ ಸಂಘ ಉಡುಪಿ (ರಿ) ಬನ್ನಂಜೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬ್ರಹ್ಮಶ್ರೀ […]