ಬ್ರಹ್ಮಾವರ: ಮಾ.2 ಮತ್ತು 3 ರಂದು ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಲೋಕಾರ್ಪಣೆ ಹಾಗೂ ಗುರುಗಳ ಮೂರ್ತಿ ಪ್ರತಿಷ್ಠೆ

ಬ್ರಹ್ಮಾವರ: ಬಿಲ್ಲವ ಸಮಾಜ ಸೇವಾ ಸಂಘ(ರಿ.) ಬ್ರಹ್ಮಾವರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಲೋಕಾರ್ಪಣೆ ಹಾಗೂ ಗುರುಗಳ ಮೂರ್ತಿ ಪ್ರತಿಷ್ಠೆ ಕಾರ್ಯಕ್ರಮವು ಮಾ. 3 ರಂದು ಸಂಜೆ ೫ ಗಂಟೆಗೆ ವಾರಂಬಳ್ಳಿ ನಾರಾಯಣಗುರು ಸಭಾಭವನದಲ್ಲಿ ಜರುಗಲಿದೆ. ಕಾರ್ಯಕ್ರಮವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದು, ಆರ್ಯ ಈಡಿಗ ಸಮಾಜ ಸೋಲೂರು ಮಠದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಬ್ರಹ್ಮಾವರ ಬಿಲ್ಲವ ಸೇವಾ ಸಮಾಜ ಸಂಘದ ಅಧ್ಯಕ್ಷ ಬಿ.ಎನ್ ಶಂಕರ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ.