ಯೋಗದಿಂದ ರೋಗಮುಕ್ತರಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಿ: ಪ್ರಕಾಶ್ಚಂದ್ರ ಶೆಟ್ಟಿ
ಬ್ರಹ್ಮಾವರ: ಜಿ.ಎಂ. ಗ್ಲೋಬಲ್ ಸ್ಕೂಲ್, ಬ್ರಹ್ಮಾವರ ಇಲ್ಲಿ ಹತ್ತನೆಯ ವಿಶ್ವ ಯೋಗ ದಿನಾಚರಣೆಯನ್ನು ಜೂ.21ರಂದು ಬೆಳಿಗ್ಗೆ 6.45ಕ್ಕೆ ಸರಿಯಾಗಿ ಜ್ಯೋತಿ ಬೆಳಗಿಸುವುದರೊಂದಿಗೆ ಕ್ರಮಬದ್ಧವಾಗಿ ಆರಂಭಿಸಲಾಯಿತು. ಪ್ರಾಂಶುಪಾಲ ಪ್ರಣವ್ ಶೆಟ್ಟಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ “ಯೋಗ, ಭಾರತದ ಪ್ರಾಚೀನ ಮತ್ತು ಸನಾತನ ವಿದ್ಯೆ. ವೇದಕಾಲಕ್ಕಿಂತಲೂ ಹಿಂದೆ ಯೋಗಾಸನಗಳು ರೂಢಿಯಲ್ಲಿದ್ದವು. ಇಂದು ಭಾರತವು ಯೋಗಾಸನ ಕ್ಷೇತ್ರದಲ್ಲಿ ವಿಶ್ವಕ್ಕೆ ಗುರುಸ್ಥಾನದಲ್ಲಿದೆ ಹಾಗೂ ಯೋಗಕ್ಕೆ ವಿಶ್ವಮಾನ್ಯತೆ ಇದೆ. ಶಿಸ್ತಿನ ಜೀವನವನ್ನು ನಡೆಸುವುದೇ ಒಂದು ಯೋಗ” ಎಂದು ಯೋಗದ ಕುರಿತು ಸ್ಫೂರ್ತಿದಾಯಕ ಮಾತುಗಳನ್ನಾಡಿದರು. ಇಂದಿನ […]