ಬ್ರಹ್ಮಾವರದಲ್ಲಿ ಕೃಷಿ ಡಿಪ್ಲೋಮಾ ಕೋರ್ಸ್ ಆರಂಭಕ್ಕೆ ಅನುಮತಿ.
ಬ್ರಹ್ಮಾವರ: ಜಿಲ್ಲೆಯ ರೈತ ಹಾಗೂ ಸಾಮಾಜಿಕ ಸಂಘಟನೆಗಳ ಬಹು ದಿನಗಳ ಬೇಡಿಕೆಯಾದ ಬ್ರಹ್ಮಾವರ ಕೃಷಿ ಸಂಶೋಧನ ಕೇಂದ್ರದಲ್ಲಿ 2024-25 ನೇ ಸಾಲಿನಿಂದ ಎರಡು ವರ್ಷಗಳ ಕೃಷಿ ಡಿಪ್ಲೋಮಾ ಕೋರ್ಸ್ ಆರಂಭಿಸಲು ರಾಜ್ಯ ಸರ್ಕಾರ ಜು.15 ರಂದು ಆದೇಶ ಹೊರಡಿಸಿದೆ. ರಾಜ್ಯ ಕೃಷಿ ಇಲಾಖೆಯ ಅಧೀನ ಕಾರ್ಯದರ್ಶಿ ಇಂದ್ರ ಎಂ ಅವರು ಹೊರಡಿಸಿರುವ ಸರ್ಕಾರಿ ಆದೇಶದಲ್ಲಿ, ಇಲಾಖೆಯ 33 ನೇ ಸಮನ್ವಯ ಸಮಿತಿ ಹಾಗೂ 7ನೇ ಪರಿಣಿತ ಸಮಿತಿ ಸಭೆಯ ತೀರ್ಮಾನದಂತೆ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ […]