ಬ್ರಹ್ಮಾವರ ಲಾಕಪ್ ಡೆತ್ ಪ್ರಕರಣ; ತನಿಖೆಗೆ ಸಿಐಡಿ ಪೊಲೀಸರ ಎಂಟ್ರಿ

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪ್ರಕರಣದ ತನಿಖೆಗೆ ಸಿಐಡಿ ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ. ಬೆಂಗಳೂರಿನಿಂದ ಉಡುಪಿಗೆ ತಲುಪಿರುವ ಸಿಐಡಿ ಪೊಲೀಸರ ತಂಡವು, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಮಾಹಿತಿ ಸಂಗ್ರಹಿಸುವ ಕಾರ್ಯ ಕೈಗೊಂಡಿದೆ. ಬಳಿಕ ಬ್ರಹ್ಮಾವರ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮೃತದೇಹ ಪರಿಶೀಲನೆ ನಡೆಸಿ ವೈದ್ಯಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿತು. ಮೃತದೇಹವನ್ನು ಮಣಿಪಾಲ ಕೆಎಂಸಿಯಲ್ಲಿ ಇಂದು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳದಿಂದ ಮೃತರ […]