ಬ್ರಹ್ಮಾವರ: ಮಹಿಳೆ ನಾಪತ್ತೆ

ಬ್ರಹ್ಮಾವರ: ಮನೆಯಿಂದ ಹೊರಗೆ ಹೋದ ಮಹಿಳೆಯೊಬ್ಬರು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ಹೊಸೂರು ಗ್ರಾಮದ 28 ವರ್ಷದ ನಿವಾಸಿ ರೇವತಿ ನಾಪತ್ತೆಯಾದ ಮಹಿಳೆ. ಇವರು ಮಾ.27ರ ರಾತ್ರಿಯಿಂದ ಮಾ.28ರ ಬೆಳಿಗ್ಗೆ 6.30ರ ಮಧ್ಯಾವಧಿಯಲ್ಲಿ ಮನೆಯಿಂದ ಹೊರಗೆ ಹೋದವರು ವಾಪಾಸ್ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಮನೆಯವರು ಎಲ್ಲ ಕಡೆ ಹುಡುಕಾಟ ನಡೆಸಿದರೂ ಈವರೆಗೂ ರೇವತಿ ಪತ್ತೆಯಾಗಿಲ್ಲ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.