ಬ್ರಹ್ಮಾವರ: ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆ
ಉಡುಪಿ: ಬ್ರಹ್ಮಾವರದಲ್ಲಿ ನರ್ಸಿಂಗ್ ವ್ಯಾಸಾಂಗ ಮಾಡುತ್ತಿದ್ದ ಕುಂದಾಪುರ ತಾಲೂಕು ಕೆರಾಡಿ ಗ್ರಾಮದ ನಿವಾಸಿ, ಭೂಮಿಕಾ (18) ಎಂಬ ಯುವತಿಯು ಪೆಬ್ರವರಿ 26 ರಂದು ಕೆರಾಡಿಯ ತನ್ನ ಮನೆಯಿಂದ ಟೈಲರ್ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂ. (08254) 258233, 9480805460 , ಬೈಂದೂರು […]
ಬ್ರಹ್ಮಾವರ: ವಿದ್ಯುನ್ಮಾನ ಮತಯಂತ್ರ ಬಳಕೆ ಅರಿವು ಕಾರ್ಯಗಾರ
ಬ್ರಹ್ಮಾವರ: ಕರ್ನಾಟಕ ಸರ್ಕಾರ ಕಂದಾಯ ಇಲಾಖೆ, ತಹಶೀಲ್ದಾರ್ ಕಚೇರಿ ಉಡುಪಿ ತಾಲೂಕು, ರಾಷ್ಟ್ರೀಯ ಸೇವಾ ಯೋಜನೆ ಘಟಕ, ರಾಜ್ಯಶಾಸ್ತ್ರ ವಿಭಾಗ ಹಾಗೂ ಆಂತರಿಕ ಗುಣಮಟ್ಟದ ಭರವಸೆ ಕೋಶ ಎಸ್ಎಮ್ಎಸ್ ಕಾಲೇಜು ಬ್ರಹ್ಮಾವರ ಇದರ ಸಹಯೋಗದೊಂದಿಗೆ ವಿದ್ಯುನ್ಮಾನ ಮತಯಂತ್ರದ ಅರಿವು ಕಾರ್ಯಗಾರವು ಫೆ.28 ರಂದು ಕಾಲೇಜಿನ ಆವರಣದಲ್ಲಿ ನಡೆಯಿತು. ಕಾರ್ಯಾಗಾರದಲ್ಲಿ ಸೆಕ್ಟರ್ ಅಧಿಕಾರಿಯಾಗಿದ್ದ ಡಾ. ಗುರುರಾಜ್ ಪ್ರಭು, ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ ಉಡುಪ, ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕೋಟ: ನಿಶಾಚರಿ ಕಳ್ಳರ ಬಂಧನ; 15 ಲಕ್ಷ ರೂ ಮೌಲ್ಯದ ಚಿನ್ನಾಭರಣ ಸಹಿತ ವಾಹನ ವಶ
ಕೋಟ: ರಾತ್ರಿ ಹೊತ್ತು ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ 15 ಲಕ್ಷ ರೂ. ಮೌಲ್ಯದ ಬೆಲೆ ಬಾಳುವ ಚಿನ್ನಾಭರಣ ಹಾಗೂ 3 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕಾಪು ಎಲ್ಲೂರು ನಿವಾಸಿ ರಾಜೇಶ್ ದೇವಾಡಿಗ (38) ಮತ್ತು ಕಾರ್ಕಳ ಹೊಸ್ಮಾರು ಈದು ನಿವಾಸಿ ಮೊಹಮ್ಮದ್ ರಿಯಾಜ್ ಹೊಸ್ಮಾರ್ ಯಾನೆ ರಿಯಾಜ್ (39) ಎಂದು ಗುರುತಿಸಲಾಗಿದೆ. ಬ್ರಹ್ಮಾವರ ವೃತ್ತದ ಕೋಟ ಠಾಣಾ ವ್ಯಾಪ್ತಿಯ ಬ್ರಹ್ಮಾವರ ತಾಲೂಕು ಪಾಂಡೇಶ್ವರ ಗ್ರಾಮದ ಮಠದ ತೋಟ […]
ಬ್ರಹ್ಮಾವರ: ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಅಣಬೆ ಬೇಸಾಯ ತರಬೇತಿ
ಬ್ರಹ್ಮಾವರ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಕೆನರಾ ಬ್ಯಾಂಕ್ ನ ಸಹಯೋಗದೊಂದಿಗೆ ನಡೆಯುತ್ತಿರುವ ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಊಟ, ವಸತಿ, ಸಮವಸ್ತ್ರ , ತರಬೇತಿ ಕಿಟ್ ನೊಂದಿಗೆ ಸಂಪೂರ್ಣ ಉಚಿತ ಅಣಬೆ ಬೇಸಾಯ ತರಬೇತಿ ಯುವಕ-ಯುವತಿಯರಿಗೆ ಪುರುಷ ಮತ್ತು ಮಹಿಳೆಯರಿಗೆ ಡಿ. 26 ರಿಂದ ಜನವರಿ 04 ವರೆಗೆ 10 ದಿನಗಳ ಕಾಲ ನಡೆಯಲಿದೆ. ಹೆಚ್ಚು ಬೇಡಿಕೆ ಇರುವ ಹಾಗೂ ಜೌಷಧೀಯ ಗುಣ ಹೊಂದಿರುವ ಅಣಬೆ ಕೃಷಿಗೆ […]
ಶಂಕರನಾರಾಯಣ: ರಸ್ತೆ ಕಾಮಗಾರಿಗಾಗಿ ಮರಗಳ ತೆರವು; ಸಾರ್ವಜನಿಕ ಅಹವಾಲು ಸಭೆ
ಶಂಕರನಾರಾಯಣ: ಸೋಮೇಶ್ವರ-ಕೋಟೇಶ್ವರ ಜಿಲ್ಲಾ ಮುಖ್ಯ ರಸ್ತೆಯಲ್ಲಿರುವ ರಸ್ತೆ ಅಗಲೀಕರಣ ಕಾಮಗಾರಿಗೆ ಅಡಚಣೆಯಾಗುವ ಅಕೇಶಿಯಾ ಹಾಗೂ ಇತರೆ ಜಾತಿಯ 147 ಮರಗಳನ್ನು ಮತ್ತು ಕುಂದಾಪುರ ತಾಲೂಕು ಕೋಟ-ಗೋಳಿಯಂಗಡಿ ಹಾಗೂ ಬ್ರಹ್ಮಾವರ-ಜನ್ನಾಡಿ ರಸ್ತೆ ಅಗಲೀಕರಣ ಕಾಮಗಾರಿಗೆ ಅಡಚಣೆಯಾಗುವ ಒಟ್ಟು 123 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ ನವೆಂಬರ್ 29 ರಂದು ಮಧ್ಯಾಹ್ನ 3 ಗಂಟೆಗೆ ಶಂಕರನಾರಾಯಣ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ […]