ಶ್ರೀ ಕ್ಷೇತ್ರ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಗೆಂಡ ಸೇವೆ ಹಾಗೂ ಮಕರ ಸಂಕ್ರಮಣ ಉತ್ಸವ
ಕುಂದಾಪುರ: ಶ್ರೀ ಕ್ಷೇತ್ರ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಗೆಂಡ ಸೇವೆ ಹಾಗೂ ಮಕರ ಸಂಕ್ರಮಣ ಉತ್ಸವ ಸಂಭ್ರಮದಿಂದ ಜರುಗಿತು. ಮೂರು ದಿನಗಳ ಕಾಲ ನಡೆಯುವ ಮಾರಣಕಟ್ಟೆಯ ಶ್ರೀ ಬ್ರಹ್ಮಲಿಂಗೇಶ್ವರ ಗೆಂಡ ಸೇವೆ ಹಾಗೂ ಜಾತ್ರಾ ಮಹೋತ್ಸವಕ್ಕೆ ಸೋಮವಾರದ ಶುಭ ಮಹೂರ್ತದಲ್ಲಿ ವಿವಿಧ ಧಾರ್ಮಿಕ ಪೂಜೆಯನ್ನು ಆರಂಭಿಸುವ ಮೂಲಕ ಚಾಲನೆ ನೀಡಲಾಯಿತು. ಭಕ್ತಿ ಸಾಗರದಲ್ಲಿ ಲೀನ: ಜಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಹರಕೆ ಹಾಗೂ ಪೂಜೆಗಳನ್ನು ಸಲ್ಲಿಸಿದರು. ಜಾತ್ರಾ ಮಹೋತ್ಸವದ ಮೊದಲ ದಿನದಿಂದಲೆ ಆಗಮಿಸುವ ಭಕ್ತರು […]