ಬ್ರಹ್ಮಾವರ ತಾಲ್ಲೂಕು ಪಂಚಾಯತ್: ಜ್ಯೋತಿ ಉದಯ ಪೂಜಾರಿ ಅಧ್ಯಕ್ಷೆ, ಸುಧೀರ್ ಕುಮಾರ್ ಶೆಟ್ಟಿ ಉಪಾಧ್ಯಕ್ಷ
ಬ್ರಹ್ಮಾವರ: ನೂತನ ಬ್ರಹ್ಮಾವರ ತಾಲ್ಲೂಕಿನ ಪಂಚಾಯಿತಿ ಮೊದಲ ಅಧ್ಯಕ್ಷರಾಗಿ ಬಿಜೆಪಿಯ ಜ್ಯೋತಿ ಉದಯ ಪೂಜಾರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು. ಬುಧವಾರ ಚಾಂತಾರು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕುಂದಾಪುರ ಸಹಾಯಕ ಕಮೀಷನರ್ ರಾಜು ಕೆ. ಅವರು ಅಧಿಕೃತವಾಗಿ ಘೋಷಿಸಿದರು. ತಹಶೀಲ್ದಾರ್ ಕಿರಣ್ ಗೋರಯ್ಯ, ಸಹಾಯಕ ನಿರ್ದೇಶಕ ಮಹೇಶ್ ಕೆ. ಉಪಸ್ಥಿತರಿದ್ದರು.