ಇತಿಹಾಸ ಪ್ರಸಿದ್ದ ಕಡಿಯಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಮುಖ್ಯಮಂತ್ರಿ ಬೊಮ್ಮಾಯಿ

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂದು ಉಡುಪಿಯ 1500 ವರ್ಷಗಳ ಇತಿಹಾಸ ಹೊಂದಿರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು, ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಸುತ್ತು ಪೌಳಿಯನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವ ಆರ್ ಅಶೋಕ್, ಗೋವಿಂದ ಕಾರಜೋಳ , ಎಸ್. ಸುನಿಲ್ ಕುಮಾರ್ , ಎಸ್ ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಘುಪತಿ ಭಟ್ ಸೇರಿದಂತೆ ಇನ್ನಿತರೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

ಕಡಿಯಾಳಿ ದೇಗುಲದಲ್ಲಿ ಶ್ರೀಮಹಿಷಮರ್ದಿನಿ ದೇವರ “ಶರಣು ಶ್ರೀದೇವಿ” ಹಾಡು ಯೂಟ್ಯೂಬ್ ನಲ್ಲಿ ಬಿಡುಗಡೆ

ಉಡುಪಿ: ಬ್ರಹ್ಮಕಲಶೋತ್ಸವದ ಪ್ರಯುಕ್ತ ಡಾ. ವಿದ್ಯಾಭೂಷಣ ಕಂಠಸಿರಿಯಲ್ಲಿ ಹೊರಬಂದಿರುವ ಜಗನ್ಮಾತೆ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವರ “ಶರಣು ಶ್ರೀದೇವಿ “ಎಂಬ ಹಾಡಿನ ಗುಚ್ಛಗಳನ್ನು ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ಯೂಟ್ಯೂನಲ್ಲಿ ಬಿಡುಗಡೆ ಮಾಡಲಾಯಿತು. ಶಾಸಕ ಕೆ ರಘುಪತಿ ಭಟ್ ಹಾಡನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಮಂಡಳಿ ಅಧ್ಯಕ್ಷರಾದ ಡಾ. ಕಟ್ಟೆ ರವಿರಾಜ್ ಆಚಾರ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ನಾಗೇಶ ಹೆಗ್ಡೆ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ ರಾಘವೇಂದ್ರ ಕಿಣಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ನಿತ್ಯಾನಂದ ಕಾಮತ್, […]