11 ವರ್ಷದ ಬಾಲೆಯ ಬಾಳಿಗೆ ಮುಳುವಾಯ್ತು ಯೂಟ್ಯೂಬ್
ಉಡುಪಿ: ಇಲ್ಲಿನ ಬ್ರಹ್ಮಗಿರಿಯಲ್ಲಿ 11 ವರ್ಷದ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಜ.14 ರಂದು ನಡೆದಿದೆ. ಮೃತ ಬಾಲಕಿಯನ್ನು ಪ್ರವೀಣ್ ಶೆಟ್ಟಿ ಎಂಬವರ ಪುತ್ರಿ ಮಂಗಳಾದೇವಿ (11) ಎಂದು ಗುರುತಿಸಲಾಗಿದೆ. ಬಾಲಕಿಯು ಕುಂಜಾರುಗಿರಿಯ ಖಾಸಗಿ ಶಾಲೆಯಲ್ಲಿ ಆರನೇ ತರಗತಿ ಓದುತ್ತಿದ್ದಳು. ಪೊಲೀಸರ ಪ್ರಕಾರ, ಶನಿವಾರದಂದು ಸಂಕ್ರಾತಿ ಪ್ರಯುಕ್ತ ಶಾಲೆಗೆ ರಜೆ ಸಾರಲಾಗಿದ್ದರಿಂದ ಬಾಲಕಿ ಮನೆಯಲ್ಲಿಯೇ ಇದ್ದಳು. ಆಕೆಯ ಪೋಷಕರು ಕೆಲಸಕ್ಕೆ ಹೋಗುವುದರಿಂದ ಆಕೆ ಮನೆಯಲ್ಲಿ ಒಬ್ಬಳೇ ಇದ್ದಳು. ಪೋಷಕರು ಸಂಜೆ ಮನೆಗೆ ಹಿಂದಿರುಗಿ […]
ಕಾಡಬೆಟ್ಟುವಿನಲ್ಲಿ ನರ್ತಕಿ ಭರತ ನಾಟ್ಯ ತರಬೇತಿ ಶಾಲೆ ಉದ್ಘಾಟನೆ
ಉಡುಪಿ: ನಮ್ಮ ದೇಶದ ಭವ್ಯ ಪ್ರಾಚೀನ ಸಾಂಸ್ಕೃತಿಕ ಪರಂಪರೆಗಳಲ್ಲಿ ಒಂದಾಗಿರುವ ಸಂಗೀತ, ನೃತ್ಯ ಕಲೆಯನ್ನು ಇಂದಿನ ಯುವ ಪೀಳಿಗೆಗೆ ದಾಟಿಸುವ ಅಗತ್ಯವಿದೆ ಎಂದು ತಲ್ಲೂರು ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ, ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಗುರುವಾರ ಉಡುಪಿ ಬ್ರಹ್ಮಗಿರಿಯ ಕಾಡಬೆಟ್ಟುವಿನಲ್ಲಿ ನೃತ್ಯಗುರು ವಿದುಷಿ ಶಾಂಭವಿ ಆಚಾರ್ಯ ಅವರ ಭರತನಾಟ್ಯ ತರಬೇತಿ ಶಾಲೆ ‘ನರ್ತಕಿ’ಯ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಾಚೀನ ಭಾರತದಲ್ಲಿ ರಾಜಾಶ್ರಯ ಪಡೆದಿದ್ದ, ಭರತಮುನಿಗಳಿಂದ ಲೋಕಾರ್ಪಣೆಗೊಂಡ ಈ ಶ್ರೀಮಂತ […]
ಜಿಲ್ಲಾ ಕಾಂಗ್ರೆಸ್ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆ
ಉಡುಪಿ: ಜಿಲ್ಲಾ ಕಾಂಗ್ರೆಸ್ ಸಮಿತಿ, ಪ ಜಾ ವಿಭಾಗದ ವತಿಯಿಂದ ಡಿ.06ರಂದು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ರವರ 66ನೇ ಮಹಾ ಪರಿನಿರ್ವಾಣ ಕಾರ್ಯಕ್ರಮವನ್ನು ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡ ನಾಗೇಶ್ ಉದ್ಯಾವರ, ಪ ಜಾ ವಿಭಾಗದ ಜಿಲ್ಲಾದ್ಯಕ್ಷ ಜಯ ಕುಮಾರ್, ಕಾಪುದಕ್ಷಿಣ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ನವೀನ್ ಚಂದ್ರ ಅಡ್ವೆ ಮುಂತಾದವರು ಭಾಗವಹಿಸಿದ್ದರು. ಪ ಜಾ ಘಟಕದ […]
ಜನರ ಸೇವೆ ಹಾಗೂ ಉತ್ತಮ ಬಾಂಧವ್ಯ ಬೆಳೆಸಲು ಲಯನ್ಸ್ ಕ್ಲಬ್ ಸಹಕಾರಿ: ಲಯನ್ ಎಂ ಕೆ ಭಟ್
ಉಡುಪಿ: ವ್ಯಕ್ತಿತ್ವ ವಿಕಸನ, ಜನರ ಸೇವೆ ಹಾಗೂ ಉತ್ತಮ ಬಾಂಧವ್ಯ ಬೆಳೆಸಲು ಲಯನ್ಸ್ ಕ್ಲಬ್ ಗಳು ಮಾದರಿ ಸಂಸ್ಥೆಯಾಗಿವೆ. ಇದನ್ನು ಎಲ್ಲರೂ ಉಪಯೋಗಿಸಿಕೊಂಡು ಇದರಲ್ಲಿ ತೊಡಗಿಸಿಕೊಳ್ಳಬೇಕು. ಬ್ರಹ್ಮಗಿರಿ ಲಯನ್ಸ್ ಕ್ಲಬ್ ಈ ರೀತಿ ಮಾದರಿ ಕ್ಲಬ್ ಆಗಿ ರೂಪುಗೊಂಡಿದೆ ಎಂದು 317 ಸಿ ಜಿಲ್ಲಾ ಗವರ್ನರ್ ಲಯನ್ ಎಂ ಕೆ ಭಟ್ ಹೇಳಿದರು. ಅವರು ಶನಿವಾರದಂದು ಕ್ಲಬ್ಬಿಗೆ ಅಧಿಕೃತ ಭೇಟಿ ನೀಡಿದ ಬಳಿಕ ಚಿಟ್ಪಾಡಿಯ ಲಕ್ಷ್ಮಿ ಟವರ್ಸ್ ನ ಶ್ರೀ ಲಕ್ಷ್ಮಿ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಸದಸ್ಯರನ್ನು […]
ಪ.ಜಾ/ಪ.ಪ ಪತ್ರಿಕೋದ್ಯಮ ಪದವೀಧರರಿಗೆ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ
ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಹ ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಉಡುಪಿ ಜಿಲ್ಲಾ ಕಚೇರಿಗೆ 2022-23 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ 15 […]