ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಹಾಗೂ ಮಾರಾಟಗಾರ ಸಹಕಾರ ಸಂಘ ಶುಭಾರಂಭ

ಬ್ರಹ್ಮಾವರ: ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಹಾಗೂ ಮಾರಾಟಗಾರ ಸಹಕಾರ ಸಂಘ( ವಿವಿಧೋದ್ದೇಶ ) ಮತ್ತು ಸಂಘದ ನೂತನ ಹವಾ ನಿಯಂತ್ರಿತ ಕಚೇರಿಯ ಶುಭಾರಂಭ ಕಾರ್ಯಕ್ರಮವು ಬ್ರಹ್ಮಾವರದ ಆಕಾಶವಾಣಿ ಸರ್ಕಲ್ ಬಳಿ ಕೃಷ್ಣಗಿರಿ ಕಾಂಪ್ಲೆಕ್ಸ್ ನಲ್ಲಿ ಗಣಪತಿ ಪೂಜೆಯೊಂದಿಗೆ ನಡೆಯಿತು. ಸಹಕಾರ ಸಂಘದ ಅಧ್ಯಕ್ಷ ಶ್ರೀಧರ್ ಪಿಎಸ್ ಮಾತನಾಡಿ, ಬೇಕರಿ ಮತ್ತು ಇತರ ಆಹಾರ ತಯಾರಿಕಾ ಘಟಕಗಳನ್ನು ಮತ್ತು ಮಾರಾಟಗಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಹಕಾರ ಸಂಘವನ್ನು ಸ್ಥಾಪನೆ ಮಾಡಲಾಯಿತು. ಕಡಿಮೆ ಬಡ್ಡಿ ದರದಲ್ಲಿ […]

ಉಡುಪಿ-ಬ್ರಹ್ಮಾವರ ವ್ಯಾಪ್ತಿ ಕಳವು ಪ್ರಕರಣ ಬೇಧಿಸಿದ ಪೊಲೀಸರು: ಆರೋಪಿಗಳ ಬಂಧನ; ಚಿನ್ನಾಭರಣ ವಶ

ಬ್ರಹ್ಮಾವರ: ಬ್ರಹ್ಮಾವರ ಮತ್ತು ಕೋಟಾ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಬ್ರಹ್ಮಾವರ ಸಿಪಿಐರವರ ವಿಶೇಷ ತಂಡ ಯಶಸ್ವಿಯಾಗಿದೆ. ಆರೋಪಿಯಿಂದ 7 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ರಾತ್ರಿ ಸಮಯದಲ್ಲಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಕಾದೂರು ತಂತ್ರಾಡಿಯ ವಿಜಯ್ ಕುಮಾರ್ ಶೆಟ್ಟಿಯನ್ನು ಬಂಧಿಸಲಾಗಿದೆ. ಜೈಲಿನಿಂದ ಬಿಡುಗಡೆಯಾದ ಕಳ್ಳತನದ ಆರೋಪಿಗಳ ಮಾಹಿತಿಯನ್ನು ಕಲೆಹಾಕಿ ಎಲ್ಲರ ಮೇಲೆ ನಿಗಾ ಇರಿಸಲಾಗಿತ್ತು. ಸೋಮವಾರದಂದು ಸಂಜೆ ನೀಲಾವರ ಕ್ರಾಸ್ ಬಳಿ ಆರೋಪಿ […]

ವಿದ್ಯಾಲಕ್ಷ್ಮೀ ಸಮೂಹ ಸಂಸ್ಥೆಯಲ್ಲಿ ಫ್ರೆಷರ್ಸ್ ಡೇ ಆಚರಣೆ

ಬ್ರಹ್ಮಾವರ: ಶನಿವಾರದಂದು ಇಲ್ಲಿನ ವಿದ್ಯಾಲಕ್ಷ್ಮೀ ಸಮೂಹ ಸಂಸ್ಥೆಯಲ್ಲಿ ಕಾಲೇಜಿನ ಹೊಸ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ ಫ್ರೆಷರ್ಸ್ ಡೇ ಅನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಜನತಾ ಪ.ಪೂ ಕಾಲೇಜಿನ ಪ್ರಾಂಶುಪಾಲ ಗಣೇಶ್ ಮೊಗವೀರ್, ಬ್ರಹ್ಮಾವ ಪೊಲೀಸ್ ಠಾಣೆಯ ಪಿ.ಎಸ್.ಐ ರಾಜಶೇಖರ್ ವಂಡಳ್ಳಿ ಇವರು ಭಾಗವಹಿಸಿದ್ದರು. ಕಾಲೇಜಿನ ಸಂಸ್ಥಾಪಕ ಸುಬ್ರಹ್ಮಣ್ಯ ಇವರು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಶುಭ ಹಾರೈಸಿದರು. ಕಾಲೇಜಿನ ನಿರ್ದೇಶಕಿ ಶ್ರೀಮತಿ ಮಮತಾ, ಪ್ರಾಂಶುಪಾಲೆ ಶ್ರೀಮತಿ ಡಾ.ಸೀಮಾ ಭಟ್, ಅಧ್ಯಾಪಕ ವೃಂದದವರು ಮತ್ತಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕಿಯರಾದ […]

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಅಂತರ್ ಕಾಲೇಜು ಭಾಷಣ ಮತ್ತು ಪ್ರಬಂಧ ಸ್ಪರ್ಧೆ

ಬ್ರಹ್ಮಾವರ: ಗುರುವಾರದಂದು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಸಾಹಿತ್ಯ ಸಂಘದ ವತಿಯಿಂದ ಪದವಿಪೂರ್ವ ಅಂತರ್ ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಮತ್ತು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸ್ಥಳೀಯ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ನೀಡಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ಮತ್ತು ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಸಂಸ್ಥೆಯ ಸಂಸ್ಥಾಪಕ ಸುಬ್ರಹ್ಮಣ್ಯ ಇವರು ಅಭಿನಂದಿಸಿದರು. ಸಂಸ್ಥೆಯ ನಿರ್ದೇಶಕಿ ಶ್ರೀಮತಿ ಮಮತಾ ಮತ್ತು ಪ್ರಾಂಶುಪಾಲೆ ಶ್ರೀಮತಿ ಡಾ ಸೀಮಾ ಭಟ್ ಮತ್ತು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. […]

ಬ್ರಹ್ಮಾವರ: ದರ್ಖಾಸ್ತು ಜಾಗ ಅತಿಕ್ರಮಣ; ಶಾಸಕ ರಘುಪತಿ ಭಟ್ ರಿಂದ ಸ್ಥಳ ಪರಿಶೀಲನೆ

ಬ್ರಹ್ಮಾವರ: ತಾಲೂಕಿನ ಆರೂರು ಗ್ರಾಮದ ಸ.ನಂ 148/2ಬಿ ರಲ್ಲಿ 1 ಎಕರೆ ಜಮೀನು ಉಡುಪಿ ತಹಶೀಲ್ದಾರರ ಎಡಿಎಸ್/ಡಿ.ಸಿ.ಆರ್.ಸಿ.ಆರ್ ನಂಬ್ರ 168/1982-83 ರಂತೆ ಶ್ರೀಕೃಷ್ಣ ನಾಯಕ ಎಂಬವರ ಹೆಸರಿಗೆ ದರ್ಖಾಸ್ತು ಮಂಜೂರಾತಿಯಾಗಿ ಅವರ ಹೆಸರಿನಲ್ಲಿ ಪಹಣಿ ದಾಖಲಾಗಿದ್ದರೂ ಈ ಜಾಗವನ್ನು ಬೇರೊಬ್ಬರು ಅತಿಕ್ರಮಿಸಿದ್ದು ಇದನ್ನು ಸರಿಪಡಿಸುವಂತೆ ಮಾಡಿರುವ ಮನವಿಯಂತೆ ಸೋಮವಾರದಂದು ಶಾಸಕ ಕೆ. ರಘುಪತಿ ಭಟ್ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡುವ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಆರೂರು […]