ಬ್ರಹ್ಮಾವರ: ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ರಕ್ಷಣೆಯ ಕುರಿತು ಅರಿವು ಕಾರ್ಯಕ್ರಮ

ಬ್ರಹ್ಮಾವರ: ಚೈಲ್ಡ್ ಲೈನ್-1098, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ರೋಟರಿ ಉಡುಪಿ ಇವರ ಸಹಯೋಗದೊಂದಿಗೆ ಮಕ್ಕಳ ದಿನಾಚರಣೆ ಮತ್ತು ಚೈಲ್ಡ್ ಲೈನ್ ಸೇ ದೋಸ್ತಿ ಸಪ್ತಾಹದ ಅಂಗವಾಗಿ ಸರ್ಕಾರಿ ಪ್ರಾಥಮಿಕ ಶಾಲೆ ಬ್ರಹ್ಮಾವರ ಇಲ್ಲಿ ಮಕ್ಕಳ ರಕ್ಷಣೆಯ ಕುರಿತು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಧನ್ವಂತರಿ ನರ್ಸಿಂಗ್ ಕಾಲೇಜಿನ […]

ಬ್ರಹ್ಮಾವರ-ಹೆಬ್ರಿ ರಸ್ತೆ ಅಗಲೀಕರಣ: ಕಲ ಕಂಬುಲವಾದ ರಸ್ತೆ; ವಾಹನ ಸವಾರರ ಪರದಾಟ

ಬ್ರಹ್ಮಾವರ: ಇಲ್ಲಿನ ಬ್ರಹ್ಮಾವರ-ಹೆಬ್ರಿ ರಸ್ತೆ ಅಗಲೀಕರಣ ನಡೆಯುತ್ತಿದ್ದು, ಕಾಮಗಾರಿಯ ಸಂದರ್ಭದಲ್ಲಿ ಧಾರಾಕಾರ ಮಳೆ ಸುರಿದದ್ದರಿಂದ ಕೆಸರು ತುಂಬಿದ ರಸ್ತೆ ಕಂಬಳದ ಕಳದಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಕೆಸರಿನಲ್ಲಿ ಜಾರುವ ರಸ್ತೆಯಿಂದಾಗಿ ಹಲವಾರು ದ್ವಿಚಕ್ರ ವಾಹನ ಸವಾರರು ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟಿದ್ದಾರೆ ಎಂದು ವರದಿಯಾಗಿದೆ.

ವಿದ್ಯಾ ಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮಾನವ ಹಕ್ಕು, ಸೈಬರ್ ಕ್ರೈಂ ಹಾಗೂ ಸಂಚಾರಿ ನಿಯಮಗಳ ಕುರಿತು ಮಾಹಿತಿ ಶಿಬಿರ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮಾನವ ಹಕ್ಕುಗಳು ಹಾಗೂ ಸೈಬರ್ ಕ್ರೈಂ ಜಾಗೃತಿ ಹಾಗೂ ಸಂಚಾರಿ ನಿಯಮಗಳ ಕುರಿತು ಕಾರ್ಯಕ್ರಮವನ್ನು ನಡೆಸಲಾಯತು. ವಕೀಲರಾದ ಪ್ರೀತಿ ವೈ ಕುಂದಾಪುರ ಇವರು ಮಾನವ ಹಕ್ಕುಗಳ ಕುರಿತು ಸೂಕ್ತ ಮಾಹಿತಿಯನ್ನು ನೀಡಿದರು. ಬಿ ಚಂದ್ರ ಅಮೀನ್ ಮಾನವ ಹಕ್ಕುಗಳ ಕುರಿತಾಗಿ, ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಸೈಬರ್ ಕ್ರೈಂ ನ ಕುರಿತಾಗಿ, ವಕೀಲೆ ಬಿಂದು ತಂಗಪ್ಪ ಹಾಗೂ ದಯಾನಂದ ಶೆಟ್ಟಿ ಟ್ರಾಫಿಕ್ ನಿಯಮದ ಕುರಿತು ಮತ್ತು ಇತರೆ ಹತ್ತು ಹಲವು ವಿಷಯಗಳ ಕುರಿತು […]

ಬ್ರಹ್ಮಾವರ: ವಿದ್ಯಾಲಕ್ಷ್ಮಿ ಸಮೂಹ ಸಂಸ್ಥೆಯಲ್ಲಿ ಕೋಟಿ ಕಂಠ ಗಾಯನ

ಬ್ರಹ್ಮಾವರ: 67 ನೇ ಕರ್ನಾಟಕ ರಜ್ಯೋತ್ಸವದ ಪ್ರಯುಕ್ತ ನನ್ನ ನಾಡು ನನ್ನ ಹಾಡು ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾದ ಕೋಟಿ ಕಂಠ ಗಾಯನದಲ್ಲಿ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಾಪಕ ವೃಂದದವರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡರು. ವಿದ್ಯಾರ್ಥಿಗಳಿಗೆ ನಾಡು ನುಡಿ ಸಂಸ್ಕೃತಿ ಮತ್ತು ಪರಂಪರೆಯ ಕುರಿತು ಅರಿವು ಮೂಡಿಸಿ ಸಂಕಲ್ಪ ವಿಧಿ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಸುಬ್ರಹ್ಮಣ್ಯ ಹಾಗೂ ನಿರ್ದೇಶಕಿ ಶ್ರೀಮತಿ ಮಮತಾ ಮತ್ತು ಪ್ರಾಂಶುಪಾಲೆ ಶ್ರೀಮತಿ ಸೀಮಾ ಭಟ್ ಉಪಸ್ಥಿತರಿದ್ದರು.