ಬ್ರಹ್ಮಾವರ: ಮಾಲೀಕರಿಲ್ಲದ ವೇಳೆ ಮನೆಗೆ ನುಗ್ಗಿ 1.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಬ್ರಹ್ಮಾವರ: ತಾಲೂಕಿನ ಹೇರಾಡಿ ರಂಗನಕೆರೆಯಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು 1.50 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ. ಆರ್.ಎಸ್ ಉದಯ್ ಕುಮಾರ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಇವರು ಬೆಂಗಳೂರಿಗೆ ತೆರಳಿದ್ದ ಸಮಯದಲ್ಲಿ ಅವರ ಪತ್ನಿ ಮತ್ತು ಮಗ ಅವರ ಅಕ್ಕನ ಮನೆಗೆ ಹೋಗಿದ್ದರು. ಅಲ್ಲದೆ ಉದಯ್ ಅವರ ತಮ್ಮ ಕೂಡಾ ಮನೆಗೆ ಬೀಗ ಹಾಕಿ ಅವರ ಸೈಕಲ್ ಅಂಗಡಿಗೆ ಹೋಗಿದ್ದರು. ಅ.22 ರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು […]

ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಸ್ಥಾಪನೆಗೆ ಸರ್ಕಾರದಿಂದ ಅಗತ್ಯ ಸಹಕಾರ ನೀಡಿಕೆ: ರಘುಪತಿ ಭಟ್

ಬ್ರಹ್ಮಾವರ: ಜಿಲ್ಲೆಯಲ್ಲಿ ಕೃಷಿ ಕಾಲೇಜು ಆರಂಭಿಸುವ ಬಗ್ಗೆ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿ.ವಿ ಮೂಲಕ ಅಗತ್ಯ ಕ್ರಮ ಕೈಗೊಳ್ಳಬೇಕಿದ್ದು, ಕರಾವಳಿ ಪ್ರದೇಶದಲ್ಲಿ ಕೃಷಿ ಕಾಲೇಜು ಅತ್ಯಂತ ಅಗತ್ಯವಾಗಿದೆ. ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಈಗಾಗಲೇ ಹೆಚ್ಚಿನ ಪ್ರಮಾಣದ ಅಗತ್ಯ ಮೂಲಭೂತ ಸೌಲಭ್ಯಗಳು, ವಿಜ್ಞಾನಿಗಳು, ಸಿಬ್ಬಂದಿಗಳು ಲಭ್ಯವಿದ್ದು ಶೀಘ್ರದಲ್ಲಿ ಕೃಷಿ ಕಾಲೇಜು ಆರಂಭಕ್ಕೆ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ಅಗತ್ಯ ಸಹಕಾರ ನೀಡಲಾಗುವುದು ಎಂದರು. ಅವರು ಶನಿವಾರ ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ […]

ಅ. 22 ರಂದು ಬ್ರಹ್ಮಾವರ ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ಕೃಷಿ ಮಹೋತ್ಸವ

ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಉಳ್ಳಾಲ, ಗೇರು ಮತ್ತು ಕೋಕೋ ಅಭಿವೃದ್ಧಿ ನಿರ್ದೇಶನಾಲಯ ಕೊಚ್ಚಿನ್, ಜಿಲ್ಲಾ ಕೃಷಿಕ ಸಮಾಜ, ಉಡುಪಿ ಮತ್ತು ದಕ್ಷಿಣ ಕನ್ನಡ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ, ಮುಖ್ಯಮಂತ್ರಿಗಳ ನೈಸರ್ಗಿಕ ಕೃಷಿ ಯೋಜನೆ, ವ.ಕೃ.ತೋ.ಸಂ.ಕೇಂದ್ರ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಹಾಗೂ ಕೃಷಿ ವಿಜ್ಞಾನ […]

ಬ್ರಹ್ಮಾವರ: ಬೋನಿಗೆ ಬಿದ್ದ ಚಿರತೆ, ನಿರಾಳರಾದ ಜನತೆ

ಬ್ರಹ್ಮಾವರ: ಎರಡು ದಿನಗಳ ಹಿಂದೆ ಕುಂದಾಪುರ ತಾಲೂಕಿನಲ್ಲಿ ಚಿರತೆಯೊಂದು ಬೋನಿಗೆ ಬಿದ್ದ ಬೆನ್ನಲ್ಲೆ ಇವತ್ತು ಬ್ರಹ್ಮಾವರ ತಾಲೂಕು ವ್ಯಾಪ್ತಿಯಲ್ಲಿ ಮತ್ತೊಂದು ಚಿರತೆಯೊಂದು ಬೋನಿನಲ್ಲಿ ಸೆರೆಯಾಗಿದೆ. ಬ್ರಹ್ಮಾವರ ತಾಲೂಕಿನ ಮಟಪಾಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಹೆಣ್ಣು ಚಿರತೆ ಬಿದ್ದಿದೆ. ಕೆಲವು ದಿನಗಳಿಂದ ಚಿರತೆ ಕಾಟದಿಂದ ಬೇಸತ್ತ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಮನವಿ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಬೋನು ಇರಿಸಿತ್ತು. ಈ ಚಿರತೆಯು ಗ್ರಾಮದ ಸಾಕು ಪ್ರಾಣಿ, ದನಗಳನ್ನ ಭಕ್ಷಿಸುವ ಮೂಲಕ ಭಯದ ವಾತಾವರಣ […]

ಬ್ರಹ್ಮಾವರ:   ಸಿವಿಲ್ ಇಂಜಿನಿಯರ್ ಗಳ  ಸಂಘದ ವತಿಯಿಂದ  ಇಂಜಿನಿಯರ್ ದಿನಾಚರಣೆ 

ಬ್ರಹ್ಮಾವರ: ಸಿವಿಲ್ ಇಂಜಿನಿಯರ್ ಗಳ  ಸಂಘದ ವತಿಯಿಂದ ಇಂಜಿನಿಯರ್ ಗಳ ದಿನವನ್ನು ಆಚ ರಿಸಲಾಯಿತು. ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿಯಲ್ಲಿ ಅಧಿಕ ಅಂಕಗಳಿಸಿದ ಮುಂಡ್ಕಿನ ಜೆಡ್ಡು ದೇವರಾಜ್ ಪ್ರಭು ಅವರ ಪುತ್ರಿ ಭೂಮಿಕಾ ಪ್ರಭು ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.