ಬ್ರಹ್ಮಾವರ: ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆ ಉದ್ಘಾಟನೆ

ಬ್ರಹ್ಮಾವರ: ಕುಕ್ಕೆಹಳ್ಳಿಯ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿಯ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 4 ಭಾನುವಾರದಂದು ಬ್ರಹ್ಮಾವರ ಮುಖ್ಯರಸ್ತೆಯ ಮಧುವನ್ ಕಾಂಪ್ಲೆಕ್ಸ್ ನಲ್ಲಿ ಜರುಗಿತು. ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, 21 ವರ್ಷಗಳ ಹಿಂದೆ ಸ್ಥಾಪನೆಯಾದ ಸಂಸ್ಥೆ ಇಂದು ಪ್ರೌಢಾವಸ್ಥೆಗೆ ತಲುಪಿದ್ದು, ಸಂಸ್ಥೆಯ ಬೆಳವಣಿಗೆಗೆ ಅಭಿನಂದನೆ. ಸಂಸ್ಥೆಯು ಕೇವಲ ಲಾಭ ಗಳಿಕೆಯ ಉದ್ದೇಶ ಮಾತ್ರದಿಂದಲ್ಲದೆ ಸಮಾಜ ಸೇವೆಯ ವಿವಿಧ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದೆ. ಸಂಸ್ಥೆಯಲ್ಲಿ ಪ್ರಾಮಾಣಿಕ […]

ಸಿ.ಎ. ಫೌಂಡೇಶನ್ ಅರ್ಹತಾ ಪರೀಕ್ಷೆ: ವಿದ್ಯಾಲಕ್ಷ್ಮಿ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ ಪ್ರಯತ್ನದಲ್ಲಿ ತೇರ್ಗಡೆ

ಬ್ರಹ್ಮಾವರ:ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ ನಡೆಸುವ ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಬ್ರಹ್ಮಾವರದ ವಿದ್ಯಾ ಲಕ್ಷ್ಮಿ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜಿನ ವಿದ್ಯಾರ್ಥಿಗಳಾದ ಜಿವೆಲ್ ಪ್ರಾರ್ಥನಾ ಮತ್ತು ಪ್ರಿಯಾ ಕಾರ್ವಿ ಇವರು ಪ್ರಥಮ ಪ್ರಯತ್ನದಲ್ಲಿ ತೇರ್ಗಡೆ ಹೊಂದಿದ್ದಾರೆ. ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಸಂಸ್ಥೆಯ ಹೆಮ್ಮೆಯ ವಿದ್ಯಾರ್ಥಿಗಳಾದ ಜಿವೆಲ್ ಪ್ರಾರ್ಥನಾ ಮತ್ತು ಪ್ರಿಯಾ ಕಾರ್ವಿ ಇವರಿಗೆ ವಿದ್ಯಾಲಕ್ಷ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಸುಬ್ರಮಣ್ಯ, ನಿರ್ದೇಶಕಿ ಶ್ರೀಮತಿ ಮಮತಾ, ಪ್ರಾಂಶುಪಾಲೆ ಡಾ. ಸೀಮಾ ಜಿ ಭಟ್, ವಾಣಿಜ್ಯ […]

ವಿದ್ಯಾಲಕ್ಷ್ಮೀ ಕಾಲೇಜಿನ ಪ್ರಾಂಶುಪಾಲೆ ಸೀಮಾ ಜಿ ಭಟ್ ಅವರಿಗೆ ಡಾಕ್ಟರೇಟ್ ಪದವಿ

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜಿನ ಪ್ರಾಂಶುಪಾಲೆ ಸೀಮಾ ಜಿ ಭಟ್ ಅವರು ಸುಳ್ಯ ಕೆ.ವಿ.ಜಿ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಮ್ಯಾನೇಜ್ ಮೆಂಟ್ ನ ಎಂಬಿಎ ವಿಭಾಗದ ಪ್ರೊಫೆಸರ್ ಹಾಗೂ ಮುಖ್ಯಸ್ಥೆ ಡಾ. ಸುರೇಖಾ ಪ್ರದೀಪ್ ಪ್ರಭು ಅವರ ಮಾರ್ಗದರ್ಶನದಲ್ಲಿ ಸಲ್ಲಿಸಿರುವ ಮಹಾಪ್ರಬಂಧಕ್ಕೆ ಬೆಳಗಾವಿ ವಿಶ್ವೇಶರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ದೊರೆತಿದೆ. “ಆರ್ಗನೈಜೇಷನಲ್ ಎರ್ಗೊನೊಮೊಕ್ಸ್ ಎಂಡ್ ಎಂಪ್ಲಾಯೀ ಸಾಟಿಸಿಫ್ಯಾಕ್ಷನ್ ಇಶ್ಯೂಸ್, ಇನ್ ಫ್ಯ್ಲೂಯೆನ್ಸಸ್ ಎಂಡ್ ಇನ್ಸೈಟ್ಸ್- ಎ ಸ್ಟಡಿ ವಿಥ್ ರೆಫೆರೆನ್ಸ್ ಟು […]

ಬ್ರಹ್ಮಾವರ: ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಇದರ 5ನೇ ಶಾಖೆ ಉದ್ಘಾಟನೆ

ಬ್ರಹ್ಮಾವರ: ವಿಶಿಷ್ಟ ಕಲ್ಪನೆಯೊಂದಿಗೆ ಪ್ರಾರಂಭಗೊಂಡು, ಸವಿತಾ ಸಮಾಜಕ್ಕೆ ಅಗತ್ಯವಿರುವ ವಸ್ತುಗಳನ್ನು ಸಹಕಾರಿ ತತ್ತ್ವದಡಿ ಪೂರೈಸಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿಯು ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಬಿ. ಎಚ್. ಕೃಷ್ಣ ರೆಡ್ಡಿ ಹೇಳಿದರು. ಅವರು ಮಂಗಳವಾರ ಬ್ರಹ್ಮಾವರ ಸೈಂಟ್ ಅಂತೋನಿ ಪ್ರೆಸ್ ಕಟ್ಟಡದ ಮೊದಲನೇ ಮಹಡಿಯಲ್ಲಿ ಸವಿತಾ ಸಹಕಾರಿಯ 5ನೇ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರಕಾರದ ಸವಲತ್ತುಗಳನ್ನು ನೇರವಾಗಿ ಜನರಿಗೆ ತಲುಪಿಸುವ […]

ಬ್ರಹ್ಮಾವರ ಲಿಟ್ಲ್ ರಾಕ್ ಶಾಲೆ ಬಳಿ ನದಿಯಂತಾದ ರಸ್ತೆ: ಪರದಾಡುತ್ತಿರುವ ಪ್ರಯಾಣಿಕರು

ಉಡುಪಿ: ಬ್ರಹ್ಮಾವರದ ಲಿಟ್ಲ್ ರಾಕ್ ಶಾಲೆ ಬಳಿಯ ರಸ್ತೆಯಲ್ಲಿ ಮಳೆ ನೀರು ತುಂಬಿಕೊಂಡಿದ್ದು, ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಪರದಾಡುವಂತಾಗಿದೆ. ರಸ್ತೆ ಪೂರ್ತಿ ಕೆಸರು ನೀರು ತುಂಬಿಕೊಂಡಿದ್ದು ಇದು ರಸ್ತೆಯೋ ಇಲ್ಲ ಹೊಳೆಯೋ ಎನ್ನುವಂತಹ ಸ್ಥಿತಿ ನಿರ್ಮಾಣವಾಗಿದೆ. ವಾಹನ ಸವಾರರು ಪ್ರಾಣ ಭಯದಲ್ಲಿ ಸಂಚರಿಸುವಂತಾಗಿದೆ. ಚಿತ್ರ ಕೃಪೆ: ರಾಜೇಶ್ ಪಾಟೀಲ್