ಡಿ. 30ರಂದು ಮಲ್ಪೆ ಕಡಲ ಕಿನಾರೆಯಲ್ಲಿ ಬೃಹತ್ ಮತ್ಸ್ಯಮೇಳ
ಉಡುಪಿ: ಮೀನುಗಾರಿಕೆ ಹಾಗೂ ಮೀನು ಸೇವನೆ ಪ್ರೋತ್ಸಾಹಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಮೀನುಗಾರಿಕಾ ಇಲಾಖೆಯ ಸಹಭಾಗಿತ್ವದಲ್ಲಿ ಬೃಹತ್ ಮತ್ಸ್ಯ ಮೇಳ ‘ಫಿಶ್ ಫೆಸ್ಟ್-2018’ ಅನ್ನು ಡಿ. 30ರಂದು ಮಲ್ಪೆ ಕಡಲ ಕಿನಾರೆಯಲ್ಲಿ ಆಯೋಜಿಸಿದೆ ಎಂದು ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಹೇಳಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಮೀನುಗಾರಿಕೆಯನ್ನು ಅಭಿವೃದ್ಧಿಪಡಿಸುವುದರೊಂದಿಗೆ ರಾಜ್ಯದಾದ್ಯಂತ ಮುಂಬರುವ ದಿನಗಳಲ್ಲಿ ಫೆಡರೇಷನ್ ವತಿಯಿಂದ ಮತ್ಸ್ಯ ಕ್ಯಾಂಟೀನ್ ಆರಂಭಿಸಿ ತಾಜಾ ಮೀನಿನ ಖಾದ್ಯಗಳನ್ನು […]