ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಬೊಮ್ಮಾಯಿ: ಇಂದು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ನಿರ್ಧಾರ

ಹೊಸದಿಲ್ಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. “ನಾನು ನನ್ನ ರಾಜೀನಾಮೆಯನ್ನು ನೀಡಿದ್ದೇನೆ ಮತ್ತು ಅದನ್ನು ಅಂಗೀಕರಿಸಲಾಗಿದೆ” ಎಂದು ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದಿದ್ದು, ಬಿಜೆಪಿ 65 ಮತ್ತು ಜೆಡಿಎಸ್ 19 ಸ್ಥಾನಗಳನ್ನು ಗಳಿಸಿದೆ. ಫಲಿತಾಂಶಗಳನ್ನು ಒಪ್ಪಿಕೊಂಡಿರುವ ಬೊಮ್ಮಾಯಿ, ಬಹುಮತ ಪಡೆಯಲು ಸಾಧ್ಯವಾಗದ ಕೊರತೆಗಳನ್ನು ವಿಶ್ಲೇಷಿಸುವುದಾಗಿ ಹೇಳಿದ್ದಾರೆ. ಪ್ರಧಾನಿ ಮತ್ತು ಬಿಜೆಪಿ ಕಾರ್ಯಕರ್ತರು […]

ಭಾರತೀಯ ಜನತಾ ಪಕ್ಷದ ‘ಪ್ರಜಾ ಪ್ರಣಾಳಿಕೆ’ ಬಿಡುಗಡೆ: ಬಿಪಿಎಲ್ ಕುಟುಂಬಕ್ಕೆ ನಂದಿನಿ ಹಾಲು; ವರ್ಷಕ್ಕೆ ಮೂರು ಉಚಿತ ಸಿಲಿಂಡರ್ ಘೋಷಣೆ

ಬೆಂಗಳೂರು: ಚುನಾವಣೆಗೆ ಇನ್ನು ಒಂಭತ್ತು ದಿನಗಳು ಬಾಕಿ ಉಳಿದಿದ್ದು, ಭಾರತೀಯ ಜನತಾ ಪಕ್ಷವು ತನ್ನ ಚುನಾವಣಾ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇಂದು ಬಿಜೆಪಿ ರಾಷ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪ್ರಣಾಳಿಕೆಯನ್ನು ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಜೆಪಿ ನಡ್ಡಾ ಅವರೊಂದಿಗೆ ಪಕ್ಷದ ನಾಯಕರು ಭಾಗಿಯಾದರು. ಬಿಪಿಎಲ್​​ ಕುಟುಂಬಕ್ಕೆ ವರ್ಷಕ್ಕೆ ಮೂರು ಅಡುಗೆ ಅನಿಲ​​ ನೀಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿದೆ. ಪ್ರತಿ ವರ್ಷ ಯುಗಾದಿ, ಗಣೇಶ ಚತುರ್ಥಿ ಹಾಗೂ ದೀಪಾವಳಿ ಹಬ್ಬದಂದು ಮೂರು ಸಿಲಿಂಡರ್​​ಗಳನ್ನು […]

ಕಿಚ್ಚ ಸುದೀಪ್ ರಾಜಕೀಯ ರಂಗ ಪ್ರವೇಶವಿಲ್ಲ; ಪ್ರಚಾರ ಮಾತ್ರ: ಬೊಮ್ಮಾಯಿ-ಸುದೀಪ್ ಜಂಟಿ ಸುದ್ದಿಗೋಷ್ಠಿ

ಬೆಂಗಳೂರು: ಬಹುಭಾಷಾ ನಟ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಾರೆ ಎನ್ನುವ ಊಹಾಪೋಹಗಳಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಸ್ವತಃ ಸುದೀಪ್ ಅವರೇ ತೆರೆ ಎಳೆದಿದ್ದಾರೆ. ಬುಧವಾರದಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯವರನ್ನು ಮಾಮಾ ಅಂತ ಕರೆಯುತ್ತೇನೆ. ಚಿತ್ರರಂಗಕ್ಕೆ ಬಂದಾಗ ನನಗೆ ಗಾಡ್ ಫಾದರ್ ಇರಲಿಲ್ಲ. ಆಗ ನನ್ನ ಜೊತೆಯಲ್ಲಿ ಕೆಲವೇ ಕೆಲವರು ನಿಂತಿದ್ದರು. ಅಂಥಹವರಲ್ಲಿ ನನ್ನ ಮಾಮ ಸಿಎಂ ಬೊಮ್ಮಾಯಿ ಒಬ್ಬರು. ಅವರು ಕೂಡಾ ಆಗ್ಅ ತಾನೇ ರಾಜಕೀಯಕ್ಕೆ ಬಂದಿದರು. ನಾನು ಅವರ […]

ನಾಡಪ್ರಭು ಕೆಂಪೇಗೌಡ ಅವರ 513 ನೇ ಜಯಂತಿ ಆಚರಣೆ: ಎಸ್ ಎಂ ಕೃಷ್ಣ, ನಾರಾಯಣ ಮೂರ್ತಿ ಮತ್ತು ಪ್ರಕಾಶ್ ಪಡುಕೋಣೆಗೆ ಕೆಂಪೇಗೌಡ ಪ್ರಶಸ್ತಿ

ಬೆಂಗಳೂರು: ಸೋಮವಾರದಂದು ಮುಖ್ಯಮಂತ್ರಿ ಬಿ.ಎಸ್ ಬೊಮ್ಮಾಯಿ ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಅವರ 513 ನೇ ಜಯಂತಿ ಉತ್ಸವವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮೊದಲ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ, ಇನ್ಫೋಸಿಸ್ ಸಂಸ್ಥೆಯ ಸಹ ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಹಾಗೂ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ ಪ್ರಕಾಶ ಪಡುಕೋಣೆ ಅವರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ […]

ಇತಿಹಾಸ ಪ್ರಸಿದ್ದ ಕಡಿಯಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಮುಖ್ಯಮಂತ್ರಿ ಬೊಮ್ಮಾಯಿ

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂದು ಉಡುಪಿಯ 1500 ವರ್ಷಗಳ ಇತಿಹಾಸ ಹೊಂದಿರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು, ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಸುತ್ತು ಪೌಳಿಯನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವ ಆರ್ ಅಶೋಕ್, ಗೋವಿಂದ ಕಾರಜೋಳ , ಎಸ್. ಸುನಿಲ್ ಕುಮಾರ್ , ಎಸ್ ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಘುಪತಿ ಭಟ್ ಸೇರಿದಂತೆ ಇನ್ನಿತರೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು.