ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಯಡಿಯೂರಪ್ಪ
ಬೆಂಗಳೂರು: ಸದ್ಯ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಅಷ್ಟು ಸರಿಯಿಲ್ಲ. ಹಾಗಾಗಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೋವಿಡ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ವಪಕ್ಷ ಶಾಸಕರ ಸಭೆ ಕರೆದಿದ್ದೇನೆ. ಅವರ ಜೊತೆ ಚರ್ಚೆ ಮಾಡುತ್ತೇವೆ. ಅವರ ವಿಧಾನಸಭಾ ಕ್ಷೇತ್ರಗಳಲ್ಲಿ ಕೊರೊನಾ ನಿಯಂತ್ರಣ ಕುರಿತಂತೆ ಸೂಕ್ತ ಮುಂಜಾಗೃತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಈಗ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿದೆ. ಆದ್ದರಿಂದ ಬೆಂಗಳೂರಿನಲ್ಲಿ ಲಾಕ್‍ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ವಿಪಕ್ಷಗಳ […]