ಭಾರತೀಯ ಜನತಾ ಪಕ್ಷದ ‘ಪ್ರಜಾ ಪ್ರಣಾಳಿಕೆ’ ಬಿಡುಗಡೆ: ಬಿಪಿಎಲ್ ಕುಟುಂಬಕ್ಕೆ ನಂದಿನಿ ಹಾಲು; ವರ್ಷಕ್ಕೆ ಮೂರು ಉಚಿತ ಸಿಲಿಂಡರ್ ಘೋಷಣೆ
ಬೆಂಗಳೂರು: ಚುನಾವಣೆಗೆ ಇನ್ನು ಒಂಭತ್ತು ದಿನಗಳು ಬಾಕಿ ಉಳಿದಿದ್ದು, ಭಾರತೀಯ ಜನತಾ ಪಕ್ಷವು ತನ್ನ ಚುನಾವಣಾ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇಂದು ಬಿಜೆಪಿ ರಾಷ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪ್ರಣಾಳಿಕೆಯನ್ನು ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಜೆಪಿ ನಡ್ಡಾ ಅವರೊಂದಿಗೆ ಪಕ್ಷದ ನಾಯಕರು ಭಾಗಿಯಾದರು. ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ ಮೂರು ಅಡುಗೆ ಅನಿಲ ನೀಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿದೆ. ಪ್ರತಿ ವರ್ಷ ಯುಗಾದಿ, ಗಣೇಶ ಚತುರ್ಥಿ ಹಾಗೂ ದೀಪಾವಳಿ ಹಬ್ಬದಂದು ಮೂರು ಸಿಲಿಂಡರ್ಗಳನ್ನು […]