ಬಿಲ್ಲವ-ಮೊಗವೀರ ಸಮಾಜವನ್ನು ಸಂಪೂರ್ಣ ಕಡೆಗಣಿಸಿದ ಬಜೆಟ್: ರಮೇಶ್ ಕಾಂಚನ್ ಆಕ್ರೋಶ
ಉಡುಪಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಬಿಲ್ಲವರಿಗೆ ಪ್ರತ್ಯೇಕ ನಿಗಮವನ್ನು ಮುಂದಿನ ಬಜೆಟ್ಟಿನಲ್ಲಿ ಘೋಷಣೆ ಮಾಡಿ ಅನುದಾನ ಇಡುವುದಾಗಿ ಹಾಗೂ ಮೀನುಗಾರರಿಗೆ ವಿಶೇಷ ಪ್ಯಾಕೇಜ್ ನೀಡುವುದಾಗಿ ಹೇಳಿ ಪ್ರಚಾರ ಗಿಟ್ಟಿಸಿಕೊಂಡ ಮುಖ್ಯಮಂತ್ರಿ ಬೊಮ್ಮಾಯಿಯವರು ತಮ್ಮ ಬಜೆಟ್ಟಿನಲ್ಲಿ ಬಿಲ್ಲವ ಹಾಗೂ ಮೊಗವೀರ ಸಮುದಾಯವನ್ನು ಸಂಪೂರ್ಣ ಕಡೆಗಣಿಸಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರಾವಳಿ ಪ್ರದೇಶದಲ್ಲಿ ಬಿಲ್ಲವ ಸಮುದಾಯ ಹಾಗೂ ಮೊಗವೀರ ಸಮುದಾಯವು ಅತೀ ಹೆಚ್ಚು ಪ್ರಾಬಲ್ಯವನ್ನು ಹೊಂದಿದ್ದು ಬಿಲ್ಲವರಿಗೆ […]